ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಪತ್ರಿಕೋದ್ಯಮದಲ್ಲಿ ಕೆಲವು ಕಾಲ ಸಕ್ರಿಯವಾಗಿದ್ದ ಇವರು, ನಿರಂತರ ಓದು, ಬರಹಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಪರಿಚಿತರು. ಇಡೀ ಕರ್ನಾಟಕವನ್ನು ಪಾದಯಾತ್ರೆಯ ಮೂಲಕ ಸಂಚರಿಸಿ ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ಸಾಧನೆ ಮಾಡಿದವರು.

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ

ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ.

ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ ಭಕ್ತಿಗೂ, ಮಾನವೀಯತೆಗೂ ಇದರಿಂದ ಒಂದು ಅರ್ಥ ಬರುತ್ತದೆಯಲ್ಲವೇ…..

ಯೋಚಿಸುವ ಸರದಿ ನಮ್ಮದು……

ಒಂದು ಸಾಂಸ್ಕೃತಿಕ ಹಬ್ಬವಾಗಿ ನಾಗರ ಪಂಚಮಿಗೆ ಯಾವುದೇ ವಿರೋಧವಿಲ್ಲ. ಹಬ್ಬಗಳು ನಮ್ಮ ಸಂಸ್ಕೃತಿಯ ಮತ್ತು ಬದುಕಿನ ಭಾಗಗಳು. ಅದನ್ನು ಆಚರಿಸುವುದು ಸಂಭ್ರಮಿಸುವುದು ಉತ್ತಮ ನಡವಳಿಕೆ. ಆದರೆ ಹಬ್ಬದ ಹೆಸರಿನಲ್ಲಿ ಮೌಢ್ಯ ಮತ್ತು ಆಹಾರ ವಸ್ತುಗಳ ವ್ಯರ್ಥವಾಗುವುದನ್ನು ತಡೆಯಬೇಕು ಮತ್ತು ಪರಿವರ್ತನೆ ಹೊಂದಬೇಕು. ಬದಲಾವಣೆ ಜಗದ ನಿಯಮ. ಅದೇ ಅರಿವು ಅದೇ ಶಿಕ್ಷಣ ಅದೇ ನಾಗರಿಕತೆ……..

ಭಾರತದಲ್ಲಿ ಸುಮಾರು 80 ಲಕ್ಷ ಜನ ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ ಎಂಬ ವರದಿಯಿದೆ. ಅಂತಹವರಿಗೆ ಹಾಲು ಎಷ್ಟು ಮುಖ್ಯ ಎಂಬುದನ್ನು ಒಮ್ಮೆ ಯೋಚಿಸಿ.

ಹೊಸ ಬಟ್ಟೆ, ಆರೋಗ್ಯಯುತ ಒಳ್ಳೆಯ ಊಟ, ಕುಟುಂಬವರು ಮತ್ತು ಗೆಳೆಯರೊಂದಿಗೆ ಮಾತುಕತೆ, ವ್ಯಕ್ತಿಗತವಾಗಿ ಮತ್ತು ಸಾಮಾಜಿಕವಾಗಿ ಒಂದಷ್ಟು ಒಳ್ಳೆಯ ಚಿಂತನೆ, ಸ್ವಲ್ಪ ವಿಶ್ರಾಂತಿ, ಮಕ್ಕಳಿಗೆ ಹಬ್ಬಗಳ ಹಿನ್ನೆಲೆ ಮತ್ತು ಪರಿಚಯ ಎಲ್ಲವೂ ಸಹನೀಯ ಮತ್ತು ಅನುಕರಣೀಯ.

ಆದರೆ ಅತ್ಯುಪಯುಕ್ತ ಆಹಾರ ಪದಾರ್ಥಗಳ ದುರುಪಯೋಗ ಅಕ್ಷಮ್ಯ. ಒಬ್ಬರನ್ನು ನೋಡಿ ಇನ್ನೊಬ್ಬರು, ಮಾಧ್ಯಮಗಳ ಮೂರ್ಖತನ ಮತ್ತು ಬೇಜವಾಬ್ದಾರಿ ಕಾರ್ಯಕ್ರಮಗಳಿಂದ ಮತ್ತೊಬ್ಬರು, ಯಾರೋ ಜ್ಯೋತಿಷಿಗಳಿಂದ ಮಗದೊಬ್ಬರು ಹೀಗೆ ಇದು ನಡೆಯುತ್ತಲೇ ಇರುತ್ತದೆ. ಪ್ರಜ್ಞಾವಂತ ನಾಗರಿಕರು ಇದಕ್ಕೆ ಒಂದು ಮಿತಿ ಹೇರಲೇಬೇಕಿದೆ.

ಸಿನಿಮಾ ನಟರ ಕಟೌಟುಗಳಿಗೆ ಹಾಲಿನ ಅಭಿಷೇಕ, ಇನ್ಯಾರಿಗೋ ಸೇಬಿನ ಹಾರ, ಸಿನಿಮಾ – ಧಾರವಾಹಿಗಳಲ್ಲಿ ಆಹಾರ ಪದಾರ್ಥಗಳನ್ನು ಚೆಲ್ಲುವ ಅಥವಾ ನಾಶಪಡಿಸುವ ದೃಶ್ಯಗಳು ಎಲ್ಲವನ್ನೂ ನಿಲ್ಲಿಸಬೇಕು. ಅದು ರಾಷ್ಟ್ರೀಯ ಸಂಪನ್ಮೂಲಗಳ ನೇರ ದುರುಪಯೋಗ ಎಂದು ಪರಿಗಣಿಸಬೇಕು.

ಹಾಲೇ ಇರಲಿ, ಹಣ್ಣು ತರಕಾರಿಗಳೇ ಇರಲಿ, ಬೇಳೆ ಕಾಳುಗಳೇ ಇರಲಿ ರೈತರು ಬಹಳ ಕಷ್ಟಪಟ್ಟು ಪ್ರಕೃತಿಯನ್ನು ಉಪಯೋಗಿಸಿಕೊಂಡು ಬೆಳೆಯುತ್ತಾರೆ. ಅದಕ್ಕೆ ಗೌರವ ಕೊಡಬೇಕಾದದ್ದು ಮತ್ತು ಸದುಪಯೋಗ ಪಡಿಸಿಕೊಳ್ಳಬೇಕಾದದ್ದು ನಮ್ಮ ಕರ್ತವ್ಯ.

ನಾಗರ ಪಂಚಮಿ ಒಂದು ಹಬ್ಬವಾಗಿ ಆಚರಿಸಿ. ಆದರೆ ಹಾವು ಅಥವಾ ಹುತ್ತಕ್ಕೆ ಹಾಲೆರೆಯದೇ ಅದೇ ಹಾಲು ಹಣ್ಣುಗಳನ್ನು ದಯವಿಟ್ಟು ಆಹಾರವಾಗಿ ಉಪಯೋಗಿಸಿಕೊಳ್ಳಿ ಅಥವಾ ಇತರರಿಗೆ ದಾನ ಮಾಡಿ. ಇದರಿಂದ ನಾಗರ ಪಂಚಮಿ ಒಂದು ಹಸಿವು ನಿವಾರಣೆಯ ಹಬ್ಬವಾಗಲಿ, ನಾಗರ ಪಂಚಮಿ ಬಸವ ಪಂಚಮಿಯಾಗಲಿ………..

ಇದನ್ನು ಧಾರ್ಮಿಕ ನಾಯಕರುಗಳು, ಮಾಧ್ಯಮಗಳವರು, ಶಿಕ್ಷಕರು, ವಿಜ್ಞಾನಿಗಳು, ರಾಜಕಾರಣಿಗಳು, ಪ್ರಗತಿಪರರು ಎಲ್ಲರೂ ಹೇಳಬೇಕು.

ಒಂದು ಸಮಾಜದ ನಿಜವಾದ ಆತ್ಮ ಅಡಗಿರುವುದು ಧರ್ಮದಿಂದಲ್ಲ, ವಿಜ್ಞಾನದಿಂದಲ್ಲ ಪ್ರಕೃತಿಯ ಸಹಜ ನಿಯಮದಿಂದ ಮಾತ್ರ. ಅದಕ್ಕಾಗಿ ನಮ್ಮ ನಿಷ್ಠೆ ಪ್ರಕೃತಿಯೆಡೆಗೆ ಇರಲಿ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ,

Share:

Leave a Reply

Your email address will not be published. Required fields are marked *

More Posts

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ

On Key

Related Posts

Composition of the Legislative Assemblies

Composition of the Legislative Assemblies:- (Subs. by the Constitution (Seventh Amendment) Act, 1956, s. 9, for art. 170.) (1) Subject to the provisions of article 333, the Legislative Assembly of

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ ಮೂಲ ಅನುಚ್ಛೇದಕ್ಕೆ ಬದಲಾಗಿ ಪ್ರತ್ಯಾಯೋಜಿಸಲಾಗಿದೆ.) (1) 333ನೆಯ ಅನುಚ್ಛೇದದ ಉಪಬಂಧಗಳಿಗೊಳಪಟ್ಟು, ಪ್ರತಿಯೊಂದು ರಾಜ್ಯದ ವಿಧಾನಸಭೆಯು ಆ ರಾಜ್ಯದಲ್ಲಿನ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಿಂದ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ ಅದನ್ನು ರದ್ದುಗೊಳಿಸಬೇಕೆಂದು ಅಥವಾ ಅಂಥ ಪರಿಷತ್ತು ಇಲ್ಲದ ರಾಜ್ಯದಲ್ಲಿ ಅಂಥ ಪರಿಷತ್ತನ್ನು ಸೃಜಿಸಬೇಕೆಂದು ಆ ರಾಜ್ಯದ ವಿಧಾನಸಭೆಯು ಆ ಸಭೆಯ ಒಟ್ಟು

CHAPTER III- THE STATE LEGISLATURE

General 168. Constitution of Legislatures in States:- (1) For every State there shall be a Legislature which shall consist of the Governor, and- (a) in the States of [Andhra Pradesh,]