ಬಾಬಾ ಸಾಹೇಬರ ರಾಷ್ಟ್ರೀಯತೆಯ ಕಲ್ಪನೆ

ವೈದ್ಯಕೀಯ ಪದವಿ ಪಡೆದಿರುವ ಎಚ್.ಸಿ.ಮಹದೇವಪ್ಪ ಅಂಬೇಡ್ಕರ್ ವಾದಿ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ ಸಚಿವರಾಗಿ ಸೇವೆ ಸಲ್ಲಿಸಿರುವ ಇವರು, ಈಗ ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಂವಿಧಾನದ ನೆರಳಲ್ಲಿ ಎಂಬ ಕೃತಿಯನ್ನು ರಚಿಸಿದ್ದು, ದಲಿತ ಚಳುವಳಿಗೆ ಶಕ್ತಿ ತುಂಬುವ ಕೆಲಸದಲ್ಲಿ ನಿರತರಾಗಿದ್ದಾರೆ.

ಡಾ ಬಿ ಆರ್ ಅಂಬೇಡ್ಕರ್ ಅವರು ರಾಷ್ಟ್ರೀಯತೆ ಮತ್ತು ರಾಷ್ಟ್ರದ ಸಮಗ್ರತೆಯ ವಿಷಯದಲ್ಲಿ ಅತ್ಯಂತ ಸ್ಪಷ್ಟವಾದ ನಿಲುವುಗಳನ್ನು ಹೊಂದಿದ್ದರು.

ಅವರ ಪ್ರಕಾರ, ಒಟ್ಟಾಗಿ ಬದುಕಬೇಕು ಎಂಬ ರಾಜಕೀಯ ಬಯಕೆ ಇದ್ದಾಗ ಮಾತ್ರವೇ, ನಮ್ಮೊಳಗೆ ಒಂದು ರಾಷ್ಟ್ರೀಯತೆಯ ಭಾವನೆಯು ಹುಟ್ಟಿಕೊಳ್ಳುತ್ತದೆ. ಇಲ್ಲಿ ಹಲವು ಬಗೆಯ ಐಕ್ಯತೆಯ ಭಾವನೆಯ ಅಗತ್ಯವಿದ್ದರೂ ಕೂಡಾ ರಾಜಕೀಯವಾದ ಬಯಕೆ ಅಥವಾ ರಾಜಕೀಯ ಐಕ್ಯತಾ ಪ್ರಜ್ಞೆಯು ರಾಷ್ಟ್ರೀಯತೆಗೆ ಬೇಕಾಗುವ ಅತ್ಯಗತ್ಯವಾದ ಅಂಶವಾಗಿರುತ್ತದೆ.

ಎರಡು ವಿಭಿನ್ನವಾದ ರಾಷ್ಟ್ರೀಯತೆಗಳು ಒಟ್ಟಾಗಿ ಬದುಕಬೇಕೆಂದರೆ ರಾಜಕೀಯ ಅಧಿಕಾರವನ್ನು ಸಮಾನವಾಗಿ ಹಂಚಿಕೊಳ್ಳುವ ವ್ಯವಸ್ಥೆ ಇರಬೇಕು. ಇಲ್ಲವೇ ಅವರೆಡೂ ರಾಷ್ಟ್ರೀಯತೆಗಳು ಬೇರ್ಪಟ್ಟು ಎರಡು ಭಿನ್ನವಾದ ರಾಷ್ಟ್ರಪ್ರಭುತ್ವವನ್ನು ರಚಿಸಿಕೊಳ್ಳಬೇಕು. ಆಧುನಿಕ ಜಗತ್ತಿನಲ್ಲಿ ಒಂದು ರಾಷ್ಟ್ರೀಯತೆಗೆ ಇನ್ನೊಂದು ರಾಷ್ಟ್ರೀಯತೆಯು ಅಧೀನವಾಗಿ ಬದುಕಲು ಸಾಧ್ಯವೇ ಇಲ್ಲ ಎಂಬುದು ಬಾಬಾ ಸಾಹೇಬರ ಸ್ಪಷ್ಟ ಅಭಿಪ್ರಾಯವಾಗಿದ್ದು, ಈ ಕಾರಣಕ್ಕಾಗಿ ಅವರು ದೇಶ ವಿಭಜನೆ ಕಲ್ಪನೆಯು ಅನಿವಾರ್ಯ ಎಂದು ನಂಬಿದ್ದರು.

ಇದೇ ಮಾತಿಗೆ ಪೂರಕವಾಗಿ ಹಿಂದೂ ರಾಷ್ಟ್ರವು ಜಾರಿಗೆ ಬಂದರೆ ಪ್ರಜಾತಂತ್ರವು ನಾಶಗೊಳ್ಳುತ್ತದೆ ಎಂದು ಪ್ರತಿಪಾದಿಸಿದ್ದ ಬಾಬಾ ಸಾಹೇಬರು ಮುಸ್ಲಿಂ ಅಥವಾ ಯಾವುದೇ ಧರ್ಮದ ಮೂಲಭೂತವಾದಿಗಳು ತಮಗೆ ಬೇಕಾದಾಗ ಮಾತ್ರವೇ ಪ್ರಜಾಪ್ರಭುತ್ವವನ್ನು ಬಳಸಿಕೊಳ್ಳುವ ಅವಕಾಶವಾದಿ ನಡೆಯನ್ನೂ ಕೂಡಾ ಸ್ಪಷ್ಟವಾಗಿ ಖಂಡಿಸಿದ್ದರು.

ಕೊನೆಯಲ್ಲಿ, ರಾಷ್ಟ್ರೀಯತೆಗಳ ಸ್ವ-ನಿರ್ಣಯಾಧಿಕಾರವು ಯಾವಾಗಲೂ ಒಂದೇ ರೀತಿಯಲ್ಲಿ ಚಲಾವಣೆ ಆಗಬೇಕಿಲ್ಲವೆಂಬ ಎಚ್ಚರಿಕೆಯನ್ನು ನೀಡುತ್ತಾರೆ. ಬಾಬಾ ಸಾಹೇಬರ ಈ ಆಲೋಚನೆಗಳೇ ನಮ್ಮ ದೇಶದಲ್ಲಿ ಭಾಷಾವಾರು ಪ್ರಾಂತ್ಯಗಳಿಂದ ಕೂಡಿದ ಗಣರಾಜ್ಯದ ರಚನೆಗೆ ಕಾರಣವಾಯಿತು ಎನಿಸುತ್ತದೆ.

Share:

Leave a Reply

Your email address will not be published. Required fields are marked *

More Posts

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ

On Key

Related Posts

Composition of the Legislative Assemblies

Composition of the Legislative Assemblies:- (Subs. by the Constitution (Seventh Amendment) Act, 1956, s. 9, for art. 170.) (1) Subject to the provisions of article 333, the Legislative Assembly of

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ ಮೂಲ ಅನುಚ್ಛೇದಕ್ಕೆ ಬದಲಾಗಿ ಪ್ರತ್ಯಾಯೋಜಿಸಲಾಗಿದೆ.) (1) 333ನೆಯ ಅನುಚ್ಛೇದದ ಉಪಬಂಧಗಳಿಗೊಳಪಟ್ಟು, ಪ್ರತಿಯೊಂದು ರಾಜ್ಯದ ವಿಧಾನಸಭೆಯು ಆ ರಾಜ್ಯದಲ್ಲಿನ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಿಂದ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ ಅದನ್ನು ರದ್ದುಗೊಳಿಸಬೇಕೆಂದು ಅಥವಾ ಅಂಥ ಪರಿಷತ್ತು ಇಲ್ಲದ ರಾಜ್ಯದಲ್ಲಿ ಅಂಥ ಪರಿಷತ್ತನ್ನು ಸೃಜಿಸಬೇಕೆಂದು ಆ ರಾಜ್ಯದ ವಿಧಾನಸಭೆಯು ಆ ಸಭೆಯ ಒಟ್ಟು

CHAPTER III- THE STATE LEGISLATURE

General 168. Constitution of Legislatures in States:- (1) For every State there shall be a Legislature which shall consist of the Governor, and- (a) in the States of [Andhra Pradesh,]