ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ ಅದನ್ನು ರದ್ದುಗೊಳಿಸಬೇಕೆಂದು ಅಥವಾ ಅಂಥ ಪರಿಷತ್ತು ಇಲ್ಲದ ರಾಜ್ಯದಲ್ಲಿ ಅಂಥ ಪರಿಷತ್ತನ್ನು ಸೃಜಿಸಬೇಕೆಂದು ಆ ರಾಜ್ಯದ ವಿಧಾನಸಭೆಯು ಆ ಸಭೆಯ ಒಟ್ಟು ಸದಸ್ಯರ ಬಹುಮತದ ಮೂಲಕ ಮತ್ತು ಸಭೆಯಲ್ಲಿ ಹಾಜರಿದ್ದು ಮತ ಕೊಡುವ ಸದಸ್ಯರ ಮೂರನೆಯ ಎರಡು ಭಾಗಕ್ಕೆ ಕಡಿಮೆಯಿಲ್ಲದಷ್ಟು ಸದಸ್ಯರ ಬಹುಮತದ ಮೂಲಕ ಆ ಬಗ್ಗೆ ನಿರ್ಣಯವನ್ನು ಅಂಗೀಕರಿಸಿದರೆ ಸಂಸತ್ತು ಕಾನೂನಿನ ಮೂಲಕ ಆ ಬಗ್ಗೆ ಉಪಬಂಧಿಸಬಹುದು.

(2) (1)ನೆಯ ಖಂಡದಲ್ಲಿ ಉಲ್ಲೇಖಿಸಲಾದ ಯಾವುದೇ ಕಾನೂನು, ಆ ಕಾನೂನಿನ ಉಪಬಂಧಗಳನ್ನು ಜಾರಿಗೊಳಿಸಲು ಅವಶ್ಯವಾಗಬಹುದಾದಂತೆ ಈ ಸಂವಿಧಾನವನ್ನು ತಿದ್ದುಪಡಿ ಮಾಡುವಂಥ ಉಪಬಂಧಗಳನ್ನು ಒಳಗೊಂಡಿರತಕ್ಕದ್ದು ಮತ್ತು ಸಂಸತ್ತು ಅವಶ್ಯವೆಂದು ಭಾವಿಸಬಹುದಾದಂಥ ಪೂರಕ, ಪ್ರಾಸಂಗಿಕ ಮತ್ತು ಆನುಷಂಗಿಕ ಉಪಬಂಧಗಳನ್ನೂ ಸಹ ಒಳಗೊಂಡಿರಬಹುದು.

(3) ಹಿಂದೆ ಹೇಳಿದ ಅಂಥ ಯಾವುದೇ ಕಾನೂನನ್ನು 368ನೆಯ ಅನುಚ್ಛೇದದ ಉದ್ದೇಶಗಳಿಗಾಗಿ ಈ ಸಂವಿಧಾನದ ಒಂದು ತಿದ್ದುಪಡಿಯೆಂದು ಭಾವಿಸತಕ್ಕದ್ದಲ್ಲ.

Source: The Constitution Of India (AS ON 14th JANUARY 2019), Government Of India, Ministry of Law and Justice, Legislative Department, Karnataka Official Language (Legislative) Commission and Directorate of Translations, Government of Karnataka, Page No. 65-66

Share:

Leave a Reply

Your email address will not be published. Required fields are marked *

More Posts

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ

On Key

Related Posts

Composition of the Legislative Assemblies

Composition of the Legislative Assemblies:- (Subs. by the Constitution (Seventh Amendment) Act, 1956, s. 9, for art. 170.) (1) Subject to the provisions of article 333, the Legislative Assembly of

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ ಮೂಲ ಅನುಚ್ಛೇದಕ್ಕೆ ಬದಲಾಗಿ ಪ್ರತ್ಯಾಯೋಜಿಸಲಾಗಿದೆ.) (1) 333ನೆಯ ಅನುಚ್ಛೇದದ ಉಪಬಂಧಗಳಿಗೊಳಪಟ್ಟು, ಪ್ರತಿಯೊಂದು ರಾಜ್ಯದ ವಿಧಾನಸಭೆಯು ಆ ರಾಜ್ಯದಲ್ಲಿನ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಿಂದ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ ಅದನ್ನು ರದ್ದುಗೊಳಿಸಬೇಕೆಂದು ಅಥವಾ ಅಂಥ ಪರಿಷತ್ತು ಇಲ್ಲದ ರಾಜ್ಯದಲ್ಲಿ ಅಂಥ ಪರಿಷತ್ತನ್ನು ಸೃಜಿಸಬೇಕೆಂದು ಆ ರಾಜ್ಯದ ವಿಧಾನಸಭೆಯು ಆ ಸಭೆಯ ಒಟ್ಟು

CHAPTER III- THE STATE LEGISLATURE

General 168. Constitution of Legislatures in States:- (1) For every State there shall be a Legislature which shall consist of the Governor, and- (a) in the States of [Andhra Pradesh,]