June 19, 2026 2:40 pm

ಮಾನವ ಬಂಧುತ್ವ ವೇದಿಕೆ ವತಿಯಿಂದ ವಿದ್ಯುತ್ ಖಾಸಗೀಕರಣ ವಿರುದ್ಧ ರಾಜ್ಯಮಟ್ಟದ ಜನ ಸಮಾವೇಶ

ಚಾಮರಾಜನಗರ: ದಿನಾಂಕ 26.02.2022 ಶನಿವಾರದಂದು ವಿದ್ಯುತ್ ಖಾಸಗೀಕರಣದ ವಿರುದ್ಧ ರಾಜ್ಯ ಮಟ್ಟದ ಜನ ಸಮಾವೇಶವನ್ನು ಮಾನವ ಬಂಧುತ್ವ ವೇದಿಕೆ ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದೆ. 

ಇದೊಂದು ಮಹತ್ವದ ಸಮಾವೇಶವಾಗಿದ್ದು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಐತಿಹಾಸಿಕ ದಿನವಾಗಲಿದೆ. ಈ ಸಮಾವೇಶದಲ್ಲಿ ಪ್ರಪ್ರಥಮ ಬಾರಿಗೆ ಜಿಲ್ಲೆಯ ಎಲ್ಲ ಜನಪರ ಸಂಘಟನೆಗಳು ಒಂದೇ ವೇದಿಕೆಯಲ್ಲಿ ಸೇರಲಿವೆ. ಮಾನವ ಬಂಧುತ್ವ ವೇದಿಕೆಯ ಆಶಯಗಳಂತೆ ಇದು ಸಾಧ್ಯವಾಗಿದೆ.

ಬೃಹತ್ ಮೆರವಣಿಗೆಯಲ್ಲಿ ಮೊದಲಿಗೆ, ದೊಡ್ಡ ರಾಷ್ಟ್ರ ಧ್ವಜ ಹಿಡಿದ ಒಬ್ಬರು, ಸಂವಿಧಾನ ಪೀಠಿಕೆ ಟ್ಟ್ಯಾಬ್ಲೋ, ನಂತರ MBV ಟೀ ಷರ್ಟ್ ಧರಿಸಿದ 100 ಸ್ವಯಂಸೇವಕರು, 200 ಮಹಿಳೆಯರು, ಅಂಬೇಡ್ಕರ್ ಫೋಟೋ ಹಿಡಿದ 100 ಮುಸ್ಲಿಂ ಸ್ವಯಂಸೇವಕರು, ಎತ್ತಿನಗಾಡಿಯಲ್ಲಿ ರೈತರು, ತೆರೆದ ವಾಹನದಲ್ಲಿ ಅತಿಥಿಗಳು, ತಮ್ಮ ವೇಷಭೂಷಣಗಳೊಂದಿಗೆ ತಮ್ಮ ಕಲಾ ಪ್ರದರ್ಶನ ನೀಡುತ್ತಾ ನಡೆಯುವ 100 ಜಾನಪದ ಕಲಾವಿದರು ಹಾಗೂ ಅತಿಥಿಗಳು ಹೆಜ್ಜೆ ಹಾಕಲಿದ್ದಾರೆ. ಇವರು ಮೆರವಣಿಗೆಯ ನಂತರ ಮಧ್ಯಾಹ್ನ  ಜಿಲ್ಲಾ MBV ಮತ್ತು ಮಹಿಳಾ ಬಂಧುತ್ವ ಸಮಾವೇಶ ನಡೆಯಲಿವೆ. 

ಕಾರ್ಯಕ್ರಮದ ಉದ್ಘಾಟನೆಯನ್ನು ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕರಾದ ಸತೀಶ್ ಜಾರಕಿಹೊಳಿಯವರು ನೆರವೇರಿಸಲಿದ್ದು, ಉರಿಲಿಂಗಪೆದ್ದಿ ಮಠದ ಪೀಠಾಧೀಶರಾದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಂಸದ ಆರ್.ಧ್ರುವ ನಾರಾಯಣ್ ವಹಿಸಲಿದ್ದು, ಹಿರಿಯ ಪತ್ರಕರ್ತ ವೈ.ಗುರುಶಾಂತ್ ವಿಷಯ ಮಂಡಿಸಲಿದ್ದಾರೆ. ರೈತ ಮುಖಂಡ ಬಡಗಲಪುರ ನಾಗೇಂದ್ರ ಅವರು ವಿದ್ಯುತ್ ಖಾಸಗೀಕರಣ – ರೈತರ ಮರಣ ಶಾಸನ ಕೃತಿಯನ್ನು ಬಿಡುಗಡೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಕೆಪಿಟಿಸಿಎಲ್ ನೌಕರರ ಸಂಘದ ಮುಖಂಡರಾದ ಡಾ.ಎ.ಆರ್.ಗೋವಿಂದಸ್ವಾಮಿ ಮತ್ತು ಮಾನವ ಬಂಧುತ್ವ ವೇದಿಕೆಯ ಮೈಸೂರು ವಿಭಾಗೀಯ ಸಂಚಾಲಕರಾದ ಡಾ.ಲೀಲಾ ಸಂಪಿಗೆ ಮತ್ತು ಮಾನವ ಬಂಧುತ್ವ ವೇದಿಕೆಯ ಚಾಮರಾಜನಗರ ವಿಭಾಗೀಯ ಸಂಚಾಲಕರಾದ ಸುಭಾಷ್ ಮಾಡ್ರಳ್ಳಿ ಭಾಗವಹಿಸಲಿದ್ದಾರೆ.

Share:

Leave a Reply

Your email address will not be published. Required fields are marked *

More Posts

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ

On Key

Related Posts

Composition of the Legislative Assemblies

Composition of the Legislative Assemblies:- (Subs. by the Constitution (Seventh Amendment) Act, 1956, s. 9, for art. 170.) (1) Subject to the provisions of article 333, the Legislative Assembly of

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ ಮೂಲ ಅನುಚ್ಛೇದಕ್ಕೆ ಬದಲಾಗಿ ಪ್ರತ್ಯಾಯೋಜಿಸಲಾಗಿದೆ.) (1) 333ನೆಯ ಅನುಚ್ಛೇದದ ಉಪಬಂಧಗಳಿಗೊಳಪಟ್ಟು, ಪ್ರತಿಯೊಂದು ರಾಜ್ಯದ ವಿಧಾನಸಭೆಯು ಆ ರಾಜ್ಯದಲ್ಲಿನ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಿಂದ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ ಅದನ್ನು ರದ್ದುಗೊಳಿಸಬೇಕೆಂದು ಅಥವಾ ಅಂಥ ಪರಿಷತ್ತು ಇಲ್ಲದ ರಾಜ್ಯದಲ್ಲಿ ಅಂಥ ಪರಿಷತ್ತನ್ನು ಸೃಜಿಸಬೇಕೆಂದು ಆ ರಾಜ್ಯದ ವಿಧಾನಸಭೆಯು ಆ ಸಭೆಯ ಒಟ್ಟು

CHAPTER III- THE STATE LEGISLATURE

General 168. Constitution of Legislatures in States:- (1) For every State there shall be a Legislature which shall consist of the Governor, and- (a) in the States of [Andhra Pradesh,]