ಬೆಳಗಾವಿ: ಕೋವಿಡ್ ನಿಯಂತ್ರಣಕ್ಕಾಗಿ ಕೊರೊನಾ ವಾರಿಯರ್ಸ್ ಗಳೊಂದಿಗೆ ಸತೀಶ್ ಶುಗರ್ಸ್ ಹಾಗೂ ಸತೀಶ ಜಾರಕಿಹೊಳಿ ಫೌಂಡೇಶನ್ ಸದಸ್ಯರು ಕೂಡ ಕೈಜೋಡಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.


ಯಮಕನಮರಡಿ ಮತಕ್ಷೇತ್ರ ಹಾಗೂ ಬೆಳಗಾವಿ ತಾಲೂಕಿನ ಕೊರೊನಾ ವಾರಿಯರ್ಸ್ ಗಳಿಗೆ ಗೋಕಾಕ್ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ಅವರು, ನಮ್ಮ ಕಾರ್ಯಕರ್ತರು ವಿವಿಧ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಗೋಕಾಕ ತಾಲೂಕಿನ ಕೊರೊನಾ ವಾರಿಯರ್ಸ್ ಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಲಾಗಿದೆ. ಇಂದು ಯಮಕನಮರಡಿ ಮತಕ್ಷೇತ್ರ ಹಾಗೂ ಬೆಳಗಾವಿ ತಾಲೂಕಿನ ವಾರಿಯರ್ಸ್ ಗಳಿಗೆ ವಿತರಣೆ ಮಾಡಲಾಗುತ್ತಿದೆ ಎಂದರು.
ಬೇರೆ ಕಡೆಯಿಂದ ಬೇಡಿಕೆಗಳು ಬಂದರೆ, ಅಲ್ಲಿಯೂ ಇವುಗಳನ್ನು ಕೊಡಲಾಗುವುದು. ಅಗತ್ಯವಿರುವವರಿಗೆ ನಮ್ಮ ಕೈಲಾದಷ್ಟು ಸಹಾಯ ಮಾಡುತ್ತೇವೆ ಎಂದು ಅವರು ಭರವಸೆ ನೀಡಿದರು.
ಇಂದು ಒಟ್ಟು 2000 ಮಾಸ್ಕ್ ಹಾಗೂ 2,500 ಸ್ಯಾನಿಟೈಸರ್ ಗಳನ್ನು ಕೊರೊನಾ ವಾರಿಯರ್ಸ್ ಗಳಿಗೆ ವಿತರಣೆ ಮಾಡಲಾಗುತ್ತಿದೆ. ಅಗತ್ಯವಿರುವ ಸೋಂಕಿತರಿಗೆ 40 ಸಿಲಿಂಡರ್ ಗಳನ್ನು ವಿತರಣೆ ಮಾಡಲು ನಿರ್ಧರಿಸಲಾಗಿದೆ. ಎಲ್ಲರಿಗೂ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಲು ಆಗುವುದಿಲ್ಲ. ಹೀಗಾಗಿ, ಮನೆಯಲ್ಲೇ ಚಿಕಿತ್ಸೆ ಪಡೆಯುವವರಿಗೆ ಆಕ್ಸಿಜನ್ ಸಿಲಿಂಡರ್ ವಿತರಣೆ ಮಾಡಲಾಗುವುದು ಎಂದರು.