October 1, 2023 8:47 am

ವಿಶ್ವದಲ್ಲಿ ಅಸಮಾನತೆ

ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ನಾಗಮೋಹನ್ ದಾಸ್ ಅವರು ಸಂವಿಧಾನ ಓದು, ಸಂವಿಧಾನ ಮತ್ತು ವಚನಗಳು, ಮಾನವ ಹಕ್ಕುಗಳು ಮತ್ತು ಮೀಸಲಾತಿ ಭ್ರಮೆ ಮತ್ತು ವಾಸ್ತವ ಮೊದಲಾದ ಕೃತಿಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ. ಈ ಮೂಲಕ ಸಾಂವಿಧಾನಿಕ ಆಶಯಗಳನ್ನು ಕನ್ನಡಿಗರಿಗೆ ಸರಳವಾಗಿ ತಲುಪಿಸುವ ಕೆಲಸವನ್ನು ಮಾಡಿದ್ದಾರೆ. ಮಾನವ ಹಕ್ಕುಗಳ ರಕ್ಷಣೆ ಮತ್ತು ಸಂವಿಧಾನದ ರಕ್ಷಣೆಯ ವಿಷಯದಲ್ಲಿ ಸಕ್ರಿಯರಾಗಿದ್ದಾರೆ. ನೂರಾರು ಉಪನ್ಯಾಸಗಳನ್ನು ನೀಡಿರುವ ಇವರು ಮಾನವೀಯ ಮೌಲ್ಯಗಳ ಪ್ರತಿಪಾದಕರಾಗಿದ್ದಾರೆ.

ಜಗತ್ತಿನ ದೇಶಗಳಲ್ಲಿ ಒಂದಲ್ಲ ಜಯ ರೀತಿಯ ವರ್ಣ, ಧರ್ಮ, ಜಾತಿ, ಜನಾಂಗೀಯ, ಲಿಂಗ ಮತ್ತು ವರ್ಗಭೇದಗಳು ಇನ್ನೂ ಜೀವಂತವಾಗಿವೆ. ಈ ತಾರತಮ್ಯವನ್ನು ಪ್ರಮುಖವಾಗಿ ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕಾಣಬಹುದು. ಇದರ ಪರಿಣಾಮವಾಗಿ ಜಗತ್ತಿನ ಬಹುಪಾಲು ಜನರನ್ನು ಹಸಿವು, ಬಡತನ, ಅನಕ್ಷರತೆ, ಅನಾರೋಗ್ಯ, ನಿರುದ್ಯೋಗ, ವಸತಿಹೀನತೆ ಇತ್ಯಾದಿಗಳು ಕಾಡುತ್ತಿವೆ. ಈ ಪರಿಸ್ಥಿತಿಯು ಹಿಂಸೆ, ದರೋಡೆ, ಕ್ರೌರ್ಯ, ಅಭದ್ರತೆ, ಶೋಷಣೆಗಳಿಗೆ ಎಡೆ ಮಾಡಿಕೊಟ್ಟಿದೆ.

ಎರಡನೇ ಮಹಾಯುದ್ಧದಲ್ಲಿ ಕೋಟಿಗಟ್ಟಲೆ ಜನರು ಸಾವನ್ನಪ್ಪಿದರು ಮತ್ತು ಗಾಯಗೊಂಡರು. ಹಿಂದೆ ಎಂದೂ ಕಾಣದಂತಹ ವಿಪತ್ತು, ವಿನಾಶ, ಭೀಕರ ನರಹತ್ಯೆ, ಆರ್ಥಿಕ ದುಂದುವೆಚ್ಚ, ಅವ್ಯವಸ್ಥೆ ಮತ್ತು ಅರಾಜಕತೆ ಇಡೀ ಜಗತ್ತನ್ನೇ ಮುಳುಗಿಸಿದವು. ಈ ಯುದ್ಧದಿಂದ ಬಂದೊದಗಿದ ರೋಗ ರುಜಿನಾದಿಗಳಿಂದ ಮತ್ತು ಆಹಾರದ ಅಭಾವದಿಂದ ಅನೇಕ ಜನರು ಸಾವನ್ನಪ್ಪಿದರು. ಬಾಂಬುಗಳನ್ನು ಸಿಡಿಸಿ ನಗರಗಳನ್ನು ಧ್ವಂಸ ಮಾಡಲಾಯಿತು. ಹಳ್ಳಿಗಳಿಗೆ ಮತ್ತು ಕಾಡುಗಳಿಗೆ ಬೆಂಕಿ ಹಚ್ಚಲಾಯಿತು. ಕೈಗಾರಿಕೆಗಳನ್ನು, ಅಣೆಕಟ್ಟುಗಳನ್ನು, ರಸ್ತೆಗಳನ್ನು, ಮೂಲಸೌಕರ್ಯಗಳನ್ನು ನಾಶಮಾಡಲಾಯಿತು. ಜನಾಂಗೀಯ ದ್ವೇಷದಿಂದ ನಡೆದ ದೊಡ್ಡ ಪ್ರಮಾಣದ ನರಹತ್ಯೆ, ಹಿಂಸೆ, ಕ್ರೌರ್ಯದಿಂದ ಜಗತ್ತಿನ ಜನರು ತತ್ತರಿಸಿ ಹೋದರು. ಹೀಗೆ ಎರಡನೇ ಮಹಾಯುದ್ಧವು ಮಾನವ ಇತಿಹಾಸದ ಘೋರ ಘಟನೆಯಾಗಿ ಪರಿಣಮಿಸಿತು. ಇದರಿಂದ ಉಂಟಾದ ದುಷ್ಪರಿಣಾಮಗಳು ಜಗತ್ತಿನ ಜನರನ್ನು ದಂಗುಬಡಿಸಿ ಮತ್ತೊಂದು ಯುದ್ಧ ನಡೆದರೆ ಇಡೀ ಜಗತ್ತೇ ನಾಶ ಎಂಬ ಕಟು ಸತ್ಯದ ಅರಿವು ಜನರಲ್ಲಿ ಮೂಡಿತು. ಮುಂದುವರೆದು 1945ರಲ್ಲಿ ವಿಶ್ವಸಂಸ್ಥೆಯ ಸ್ಥಾಪನೆಯಾಯಿತು.

ವಿಶ್ವಸಂಸ್ಥೆಯ ಉದ್ದೇಶಗಳಲ್ಲಿ ಮಾನವ ಹಕ್ಕುಗಳನ್ನು ಪ್ರೋತ್ಸಾಹಿಸುವುದು ಮತ್ತು ಅವುಗಳನ್ನು ವಿಶ್ವದಾದ್ಯಂತ ವಿಸ್ತರಿಸುವುದು ಮುಖ್ಯವಾಗಿದೆ. ಈ ಗುರಿಸಾಧನೆಗಾಗಿ ವಿಶ್ವಸಂಸ್ಥೆ 1948ರಲ್ಲಿ ಮಾನವ ಹಕ್ಕುಗಳನ್ನು ಘೋಷಣೆ ಮಾಡಿತು.  

ವಿಶ್ವ ಸಂಸ್ಥೆಯ ಬಹುಪಾಲು ಸದಸ್ಯ ರಾಷ್ಟ್ರಗಳು ಮಾನವ ಹಕ್ಕುಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡುತ್ತಿವೆ ಮತ್ತು ಒಂದಷ್ಟು ಸಾಧನೆಯಾಗಿದೆ. ಜಗತ್ತಿನಾದ್ಯಂತ ಯಾವುದಾದರೂ ಸಿದ್ಧಾಂತ ಜನರ ಮನ್ನಣೆಯನ್ನು ಗಳಿಸಿದ್ದರೆ ಅದು ಮಾನವ ಹಕ್ಕುಗಳ ಸಿದ್ಧಾಂತ. ಅದು ವಸಾಹತುಶಾಹಿ ಪದ್ಧತಿಯನ್ನು ಮತ್ತು ವರ್ಣ ದ್ವೇಷವನ್ನು ರದ್ದುಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಪ್ರಜಾ ಪ್ರಭುತ್ವದ ಪ್ರತಿ ಹೆಜ್ಜೆಯ ಗೆಲುವು ಮಾನವ ಹಕ್ಕುಗಳ ಘೋಷಣೆಯ ಕಾರಣದಿಂದಾಗಿದೆ. ಮಹಿಳೆಯರು, ಮಕ್ಕಳು, ವಿಕಲ ಚೇತನರು, ಜೀತದಾಳುಗಳು ಮೊದಲಾದವರ ಕನಿಷ್ಠ ಹಕ್ಕುಗಳ ರಕ್ಷಣೆಯಲ್ಲಿ ಮಹಾಪಾತ್ರ ವಹಿಸಿದೆ. ಚಿತ್ರಹಿಂಸೆ, ಕೌರ್ಯ, ಜನಾಂಗೀಯ ದ್ವೇಷ, ಯುದ್ಧ ಇತ್ಯಾದಿಗಳನ್ನು ಹಿಮ್ಮೆಟ್ಟಿಸುವಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ. ಇವೆಲ್ಲ ಸಾಧನೆಗಳನ್ನು ‘ಸಾಮಾಜಿಕ ನ್ಯಾಯದ’ ಸಾಧನೆ ಎನ್ನಬಹುದು.

ಎಲ್ಲ ರೀತಿಯ ಅಸಮಾನತೆಯನ್ನು ಕೊನೆಗಾಣಿಸಲು ವಿಶ್ವಸಂಸ್ಥೆ 2007ರಲ್ಲಿ ಒಂದು ನಿರ್ಣಯವನ್ನು ಮಾಡಿ ಸದಸ್ಯ ರಾಷ್ಟ್ರಗಳು ಪ್ರತಿವರ್ಷ ಫೆಬ್ರವರಿ 20ರಂದು `ವಿಶ್ವ ಸಾಮಾಜಿಕ ನ್ಯಾಯ ದಿನ’ವನ್ನಾಗಿ ಆಚರಿಸಲು ಕರೆಯನ್ನು ನೀಡಿತು. ಇದು 2009ರಿಂದ ಜಾರಿಗೆ ಬಂತು. ಇಂದು ಜಗತ್ತಿನಾದ್ಯಂತ “ವಿಶ್ವ ಸಾಮಾಜಿಕ ನ್ಯಾಯ ದಿನ”ವನ್ನು ಆಚರಿಸಲಾಗುತ್ತಿದೆ. ವಿಶ್ವದಲ್ಲಿ ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಎಲ್ಲರೂ ಸಮಾನರಾಗಿ ಗೌರವದಿಂದ ಬಾಳುವಂತೆ ಮಾಡಬೇಕೆಂಬುದು ಈ ದಿನದ ಆಚರಣೆಯ ಉದ್ದೇಶ.

ಭಾರತದ ಸಂವಿಧಾನದ ಪ್ರಸ್ತಾವನೆಯಲ್ಲಿ ಮತ್ತು ಹಲವು ಅನುಚ್ಛೇದಗಳಲ್ಲಿ ವಿಶ್ವಸಂಸ್ಥೆ ಘೋಷಣೆ ಮಾಡಿರುವ ಮಾನವಹಕ್ಕುಗಳನ್ನು ಕಾಣಬಹುದು. ಕಳೆದ 12 ವರ್ಷಗಳ ಗಣರಾಜ್ಯ ಭಾರತದಲ್ಲಿ ಮಾನವ ಹಕ್ಕುಗಳು ಸ್ವಲ್ಪಮಟ್ಟಿಗೆ ಜಾರಿಯಾಗಿವೆ. ಇದರ ಪರಿಣಾಮವಾಗಿ ದೇಶದ ಮಹಿಳೆಯರ, ಮಕ್ಕಳ, ವೃದ್ಧರ, ವಿಕಲಚೇತನರ, ದಲಿತರ, ಅಲ್ಪಸಂಖ್ಯಾತರ, ಕಾರ್ಮಿಕರ ಜೀವನಮಟ್ಟದಲ್ಲಿ ಸ್ವಲ್ಪ ಸುಧಾರಣೆಗಳನ್ನು ಕಾಣಬಹುದು. ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಕಟ್ಟಿದ್ದೇವೆ ಮತ್ತು ಸುಧಾರಣೆಗಳನ್ನು ತಂದಿದ್ದೇವೆ. ಸಮಾಜದ ಬಹುಪಾಲು ಚಟುವಟಿಕೆಯನ್ನು ಕಾನೂನಿನ ನಿಯಂತ್ರಣಕ್ಕೆ ಒಳಪಡಿಸಿದ್ದೇವೆ.

ಇಷ್ಟೆಲ್ಲ ಸಾಧನೆಯ ಮಧ್ಯೆ ಇನ್ನೂ ಸಮಸ್ಯೆಗಳು ಮುಂದುವರಿಯುತ್ತಿವೆ. ಹೊಸ ಸಮಸ್ಯೆಗಳು ಸೇರಿಕೊಂಡಿವೆ ಮತ್ತು ಸವಾಲುಗಳೂ ಇವೆ. ಜಾತಿ ಅಸಮಾನತೆ ಮುಂದುವರೆದಿದೆ. ಮಹಿಳೆಯರ, ಮಕ್ಕಳ, ದಲಿತರ, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಸಂವಿಧಾನದಲ್ಲಿ ನೀಡಿರುವ ಹಕ್ಕುಗಳನ್ನು ಕಳೆದುಕೊಳ್ಳುತ್ತಿದ್ದೇವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ನೀವು ಏನು ಮಾಡಬೇಕು. ದುಷ್ಟರ ಗೆಲುವಿಗೆ ಸಜ್ಜನರ ಮೌನವೇ ಕಾರಣವೆಂಬ ನಾಣ್ಣುಡಿಯನ್ನು ನಾವೆಲ್ಲ ನೆನಪಿನಲ್ಲಿಡಬೇಕು. ನಮ್ಮ ಬಾಯಿಗೆ ಹಾಕಿರುವ ಬೀಗವನ್ನು ಮುರಿದು ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು.

Share:

Leave a Reply

Your email address will not be published. Required fields are marked *

More Posts

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ

On Key

Related Posts

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ

ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ

ಇಂದು ಆಗಸ್ಟ್ 20. ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆಯ ಸಂದರ್ಭದಲ್ಲಿ ಒಂದಷ್ಟು ಮಾತುಕತೆ…….. ವಿಜ್ಞಾನ ಮತ್ತು ಧರ್ಮ ಒಂದಕ್ಕೊಂದು ಪೂರಕವೇ ಅಥವಾ ವಿರುದ್ದವೇ ಅಥವಾ ಪರ್ಯಾಯವೇ ಅಥವಾ ಸಮಾನಾಂತರವೇ ಅಥವಾ ಪ್ರತಿಸ್ಪರ್ಧಿಗಳೇ ಅಥವಾ ಸಂಬಂಧವಿಲ್ಲವೇ….. ಧರ್ಮ ( ಮತ ) ಎಂಬುದು

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ.

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಅನುಭವಿಸಿಕೊಂಡು ಬಂದಿದ್ದಾರೆ. ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಸಮಾನತೆಯನ್ನು ತರುವುದು ನಮ್ಮ ಸಂವಿಧಾನದ

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು