ಚುನಾವಣೆಗಳಲ್ಲಿ ಮಾಧ್ಯಮದ ಪಾತ್ರ

ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ನಾಗಮೋಹನ್ ದಾಸ್ ಅವರು ಸಂವಿಧಾನ ಓದು, ಸಂವಿಧಾನ ಮತ್ತು ವಚನಗಳು, ಮಾನವ ಹಕ್ಕುಗಳು ಮತ್ತು ಮೀಸಲಾತಿ ಭ್ರಮೆ ಮತ್ತು ವಾಸ್ತವ ಮೊದಲಾದ ಕೃತಿಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ. ಈ ಮೂಲಕ ಸಾಂವಿಧಾನಿಕ ಆಶಯಗಳನ್ನು ಕನ್ನಡಿಗರಿಗೆ ಸರಳವಾಗಿ ತಲುಪಿಸುವ ಕೆಲಸವನ್ನು ಮಾಡಿದ್ದಾರೆ. ಮಾನವ ಹಕ್ಕುಗಳ ರಕ್ಷಣೆ ಮತ್ತು ಸಂವಿಧಾನದ ರಕ್ಷಣೆಯ ವಿಷಯದಲ್ಲಿ ಸಕ್ರಿಯರಾಗಿದ್ದಾರೆ. ನೂರಾರು ಉಪನ್ಯಾಸಗಳನ್ನು ನೀಡಿರುವ ಇವರು ಮಾನವೀಯ ಮೌಲ್ಯಗಳ ಪ್ರತಿಪಾದಕರಾಗಿದ್ದಾರೆ.

ಚುನಾವಣೆಗಳು ಇಲ್ಲದೆ ಪ್ರಜಾ ಪ್ರಭುತ್ವವಿಲ್ಲ. ಮಾಧ್ಯಮಗಳು ಇಲ್ಲದೆ ಚುನಾವಣೆಗಳು ಇಲ್ಲ. ಆದ್ದರಿಂದ ಪ್ರಜಾಪ್ರಭುತ್ವ, ಚುನಾವಣೆಗಳು ಮತ್ತು ಮಾಧ್ಯಮ ಒಂದಕ್ಕೊಂದು ನಿಕಟ ಸಂಬಂಧ ಹೊಂದಿವೆ.

ಮತದಾರರ ತೀರ್ಮಾನಗಳು ಅಥವಾ ಆಯ್ಕೆಗಳು ಅವರಿಗೆ ಲಭ್ಯವಿರುವ ಮಾಹಿತಿಯ ಮೇಲೆ ಅವಲಂಬಿಸಿವೆ. ಪ್ರಜಾಪ್ರಭುತ್ವದಲ್ಲಿ ಜನರು ತಮ್ಮ ಮುಕ್ತವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕಾದರೆ ಮಾಹಿತಿ ಬಹಳ ಮುಖ್ಯವಾಗುತ್ತದೆ.

ಇಂದು ಮತದಾರರು ಮಾಹಿತಿಯನ್ನು ಪಡೆಯುತ್ತಿರುವುದು ಮುಖ್ಯವಾಗಿ ಮೂರು ಮೂಲಗಳಿಂದ. ಅವುಗಳೆಂದರೆ :

1. ದಿನಪತ್ರಿಕೆಗಳು

2. ಟಿ.ವಿ. ಚಾನಲ್‌ಗಳು

3. ಸಾಮಾಜಿಕ ಜಾಲತಾಣ

ಪ್ರತಿದಿವಸ ಸುಮಾರು 8500 ದಿನಪತ್ರಿಕೆಗಳು 100 ಭಾಷೆಗಳಲ್ಲಿ ಪ್ರಕಟವಾಗುತ್ತಿವೆ. ನೂರಾರು ಚಾನಲ್ ಗಳಿಂದ ಮತದಾರರು ಮಾಹಿತಿಯನ್ನು ಪಡೆಯುತ್ತಿದ್ದಾರೆ. ಇವುಗಳ ಜೊತೆಗೆ ಕಳೆದ 10 ವರ್ಷಗಳಲ್ಲಿ ಸೋಷಿಯಲ್ ಮೀಡಿಯವು ಸಹ ದೊಡ್ಡ ಪ್ರಭಾವ ಬೀರಿದೆ. ಸುದ್ದಿ ಮಾಧ್ಯಮ ಮತ್ತು ಚಿತ್ರ ಮಾಧ್ಯಮಗಳು ಜನಾಭಿಪ್ರಾಯವನ್ನು ರೂಪಿಸಬಲ್ಲ ಶಕ್ತಿಯನ್ನು ಪಡೆದುಕೊಂಡಿವೆ.

ಚುನಾವಣೆಗಳ ಸಮಯದಲ್ಲಿ ಮಾಧ್ಯಮಗಳ ಪ್ರಮುಖ ಕರ್ತವ್ಯವೆಂದರೆ:

  1. ಮತದಾರರಿಗೆ ಶಿಕ್ಷಣವನ್ನು ನೀಡಬೇಕು.
  2. ಸರ್ಕಾರದ ಕಾರ್ಯ ಸಾಧನೆ, ವೈಫಲ್ಯ ಇತ್ಯಾದಿಗಳ ಬಗ್ಗೆ ವರದಿಯನ್ನು ನೀಡಬೇಕು.
  3. ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ಆರೋಗ್ಯಕರ ಚರ್ಚೆಗೆ ಮಾಧ್ಯಮಗಳು ವೇದಿಕೆಯಾಗಬೇಕು.
  4. ಒಟ್ಟಾರೆ ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಕಣ್ಣಾವಲಿಟ್ಟು ಕೆಲಸ ಮಾಡಬೇಕು.

ಚುನಾವಣೆಗಳಲ್ಲಿ ಜನಸಾಮಾನ್ಯರ ಸಮಸ್ಯೆಗಳಾದ ಬಡತನ, ಶಿಕ್ಷಣ, ಆರೋಗ್ಯ ಉದ್ಯೋಗ, ಕೃಷಿ ಬಿಕ್ಕಟ್ಟು, ಕೈಗಾರಿಕಾ ಬಿಕ್ಕಟ್ಟು ಇತ್ಯಾದಿ ವಿಷಯಗಳು ಚರ್ಚೆಗೆ ಬರುತ್ತಿಲ್ಲ. ಬದಲಿಗೆ ಬದುಕಿಗೆ ಅಗತ್ಯವಿಲ್ಲದ ವಿಷಯಗಳಾದ ಮಂದಿರ-ಮಸೀದಿ, ಮತಾಂತರ, ಸಮಾನ ಸಿವಿಲ್ ಕೋಡ್, ಅನುಚ್ಛೇದ 370, ಪೌರತ್ವ ಕಾಯಿದೆ ಇತ್ಯಾದಿಗಳು ಆದ್ಯತೆ ಪಡೆಯುತ್ತಿವೆ. ದೇಶ ಎದುರಿಸುತ್ತಿರುವ ಸಮಸ್ಯೆಗಳ ಮತ್ತು ಸವಾಲುಗಳ ಬಗ್ಗೆ ಮಾಧ್ಯಮಗಳು ಚರ್ಚೆ ನಡೆಸುವ ವೇದಿಕೆಯಾಗಬೇಕು. ವಿವಿಧ ರಾಜಕೀಯ ಪಕ್ಷಗಳು ಮತ್ತು ರಾಜಕಾರಣಿಗಳು ಈ ದೇಶದ ಸಮಸ್ಯೆಗಳನ್ನು ಯಾವ ರೀತಿ ಪರಿಹರಿಸುತ್ತಾರೆ ಮತ್ತು ಸವಾಲುಗಳನ್ನು ಯಾವ ರೀತಿ ಹಿಮ್ಮೆಟ್ಟಿಸುತ್ತಾರೆ ಎಂಬುದಾಗಿ ತಿಳಿಯಪಡಿಸುವ ವೇದಿಕೆಯಾಗಬೇಕು.

ಆದರೆ ದೇಶದಲ್ಲಿ ಇಂದು ಮಾಧ್ಯಮಗಳು ಸೇವಾ ಕ್ಷೇತ್ರದಿಂದ ದೂರ ಸರಿದು ವ್ಯಾಪಾರೀಕರಣವಾಗುತ್ತಿದೆ. ಹಣ ಗಳಿಕೆಯೇ ಮುಖ್ಯ ಗುರಿಯಾಗಿದೆ. ಹೆಚ್ಚು ಹಣ ಗಳಿಸಲು ಹೆಚ್ಚು ಪ್ರಸರಣ ಸಂಖ್ಯೆಯು ಅಗತ್ಯ ಅನಿವಾರ್ಯವಾಯಿತು. ಇದಕ್ಕಾಗಿ ಕೀಳು ಮಟ್ಟದ ಅಭಿರುಚಿಗಳಾದ ಕ್ರೈಂ, ಸೆಕ್ಸ್ ಮತ್ತು ರೋಚಕ ಸುದ್ದಿಗಳನ್ನು ಪತ್ರಿಕೆಗಳಲ್ಲಿ ತುಂಬಲಾಗುತ್ತಿದೆ. ಅನೇಕ ಸಂದರ್ಭಗಳಲ್ಲಿ ಬಣ್ಣ ಬಳಿದುಕೊಂಡ, ತಿರುಚಲ್ಪಟ್ಟಿರುವ ಹಾಗೂ ಸತ್ವ ಕಳೆದುಕೊಂಡ ಸುದ್ದಿಯನ್ನು ಜನಸಾಮಾನ್ಯರಿಗೆ ನೀಡಲಾಗುತ್ತಿದೆ. ಪತ್ರಿಕೋದ್ಯಮ ಒಂದು ಸವಾಲಾಗಿ ನಮ್ಮ ಮುಂದಿದೆ. ಮಾಧ್ಯಮ ಇಂತಹ ಪರಿಸ್ಥಿತಿಯಿಂದ ಹೊರಬಂದರೆ ಮಾತ್ರ ಮುಕ್ತವಾದಂತಹ ಚುನಾವಣೆಗಳು ನಡೆಯಲು ಸಾಧ್ಯ. ಮುಕ್ತವಾದ ಮತ್ತು ಪಾರದರ್ಶಕವಾದ ಚುನಾವಣೆಗಳು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಸಾಧ್ಯ.

Share:

Leave a Reply

Your email address will not be published. Required fields are marked *

More Posts

On Key

Related Posts

ಗಾಂಧಿ – ಅಂಬೇಡ್ಕರ್ ಜುಗಲ್ಬಂದಿ 

[ 8.1.2024 ರಂದು ಮೈಸೂರು ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದ ವತಿಯಿಂದ  ಇತಿಹಾಸತಜ್ಞ ರಾಮಚಂದ್ರ ಗುಹಾ ಅವರೊಂದಿಗೆ ನಡೆದ “ಗಾಂಧಿ-ಅಂಬೇಡ್ಕರ್ ಪ್ರಸ್ತುತತೆ” ಮಾತುಕತೆಯ ಸಂದರ್ಭದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ವಿಸ್ತೃತ ಅಕ್ಷರ ರೂಪ]  ಇತಿಹಾಸತಜ್ಞ ರಾಮಚಂದ್ರ ಗುಹಾ ಅವರನ್ನು

ನ್ಯಾಯಾಂಗದ ವಿಸ್ತರಣೆ ಮತ್ತು ಸಾಧನೆ

ಸಮಾಜದ ಜನರ ನಡುವೆ ಬೆಳೆದು ಬರುವ ವ್ಯಾಜ್ಯಗಳನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು. ಶಾಂತಿ ಇರುವೆಡೆಯಲ್ಲಿ ಅಭಿವೃದ್ಧಿ ಇರುತ್ತದೆ. ಜನರಿಗೆ ನ್ಯಾಯ ಸಿಕ್ಕಿದರೆ ತೃಪ್ತಿಪಡುತ್ತಾರೆ. ನ್ಯಾಯ ದೊರಕಿಸಿಕೊಳ್ಳುವಲ್ಲಿ ಸೋತರೆ ಅನ್ಯ ಮಾರ್ಗಗಳನ್ನು ಅನುಸರಿಸುತ್ತಾರೆ. ಮುಂದುವರೆದು ದಂಗೆಯೇಳುತ್ತಾರೆ. ಯಾವುದೇ ರೀತಿಯ ಭೇದಭಾವವಿಲ್ಲದೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ

ಮಂಡ್ಯದ ಜನತೆಗೆ ಕರಾವಳಿಯ ಬಂಧುವೊಬ್ಬ ಬರೆದ ಪತ್ರ

ಮಂಗಳೂರಿನಿಂದ ಶ್ರೀ ಎಂ. ಜಿ. ಹೆಗಡೆ ಯವರು ನಮಗೆ, ಅಂದರೆ ಮಂಡ್ಯ ಜಿಲ್ಲೆಯವರಿಗೆ ತಮ್ಮ ಅನುಭವದ ಹಿನ್ನೆಲೆಯಲ್ಲಿ ಬರೆದ ಪತ್ರ ಇಲ್ಲಿದೆ. ದಯಮಾಡಿ ಶಾಂತಚಿತ್ತರಾಗಿ ಓದಿ. ಯಾರದೋ ದಾಳಕ್ಕೆ ನಮ್ಮ ನಿಮ್ಮ ಮಕ್ಕಳು ಬಲಿಯಾಗುವುದು ಬೇಡ. ವಿವೇಕದಿಂದ  ವರ್ತಿಸೋಣ. ಸಕ್ಕರೆ ನಾಡಿನ

ಅಂಬೇಡ್ಕರರ ‘ಹಿಂದೂ ಧರ್ಮದ ಒಗಟುಗಳು’ ಪ್ರಕಟವಾಗಿ ದೊಡ್ಡ ಅಲ್ಲೋಲ ಕಲ್ಲೋಲ ಹುಟ್ಟು ಹಾಕಿತ್ತು

1987ರಲ್ಲಿ ಅಂಬೇಡ್ಕರರ ‘ಹಿಂದೂ ಧರ್ಮದ ಒಗಟುಗಳು’ ಪ್ರಕಟವಾಗಿ ದೊಡ್ಡ ಅಲ್ಲೋಲ ಕಲ್ಲೋಲ ಹುಟ್ಟು ಹಾಕಿತ್ತು. ಅದರಲ್ಲೂ ಆ ಕೃತಿಯ ‘ರಾಮ-ಕೃಷ್ಣರ ಒಗಟುಗಳು’ ಭಾಗ. ಮಹಾರಾಷ್ಟ್ರದಲ್ಲಂತೂ 1988ರ ಜನವರಿಯಲ್ಲಿ ಆ ಕೃತಿಯನ್ನೇ ಸುಟ್ಟು ಹಾಕಿದ್ದರು. ಆ ಸಂದರ್ಭದಲ್ಲಿ ಕನ್ನಡದ ಓದುಗರಿಗೂ ಆ ಕೃತಿ

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿರುವ Educate, Unite ಮತ್ತು Agitate ಪದಗಳ ಅರ್ಥವೇನು?

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕುರಿತು ಮಾತನಾಡುವ ಬಹುತೇಕರು ಅವರು ಹೇಳಿರುವ Educate, Unite ಮತ್ತು Agitate ಪದಗಳನ್ನು ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂದು ವಿವರಿಸಿದ್ದಾರೆ. ಆರಂಭದಲ್ಲಿ ಅಂಬೇಡ್ಕರ್ ಅವರ ಚಿಂತನೆಯನ್ನು ಸೂತ್ರ ರೂಪದಲ್ಲಿ ಸರಳವಾಗಿ ವಿವರಿಸುವ ಸಲುವಾಗಿ ಶಿಕ್ಷಣ, ಸಂಘಟನೆ