March 25, 2023 5:01 pm

ರಾಜರತ್ನ ಅವರದು 30 ವರ್ಷಗಳಲ್ಲಿ ನನ್ನನ್ನು ಪ್ರಭಾವಿಸಿದ ಭಾಷಣ: ಸತೀಶ್ ಜಾರಕಿಹೊಳಿ

ಬೆಳಗಾವಿ: ಕಳೆದ 30 ವರ್ಷಗಳಲ್ಲಿ ರಾಜರತ್ನ ಅಂಬೇಡ್ಕರ್ ಅವರದು ನನ್ನನ್ನು ಪ್ರಭಾವಿಸಿದ ಭಾಷಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.  

ಚಿಕ್ಕೋಡಿಯ ಇಂದಿರಾ ನಗರದಲ್ಲಿ ನಡೆದ ಬುದ್ಧನೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಮಾತಾಡಿದ ಅವರು, ಇಷ್ಟು ದಿನಗಳ ಕಾಲ ದೇವರನ್ನು ಹೊರತುಪಡಿಸಿ ಮಾತಾಡುವ ನಮಗೆ ಜೊತೆಗಾರರು ಇರಲಿಲ್ಲವೆನಿಸುತ್ತಿತ್ತು. ನಿಜಗುಣಾನಂದ ಶ್ರೀಗಳು ಮತ್ತು ನಾನು ಈ ಕುರಿತು ಮಾತಾಡುತ್ತಿದ್ದೆವು. ರಾಜರತ್ನ ಅವರ ಮಾತುಗಳನ್ನು ಕೇಳಿದ ನಂತರ ಇದೀಗ ನಮ್ಮ ಸಂಖ್ಯೆ ಹೆಚ್ಚಾಗಿದೆ ಎಂಬ ಭಾವ ಮೂಡಿದೆ ಎಂದರು.  

ಬುದ್ಧ, ಬಸವ, ಅಂಬೇಡ್ಕರ್ ಅವರ ದಾರಿಯಲ್ಲಿ ಮಾನವ ಬಂಧುತ್ವ ವೇದಿಕೆಯನ್ನು ಜನರ ಬಳಿ ಕೊಂಡೊಯ್ದಿದ್ದೇವೆ. ಇದರ ಮೂಲಕ ನಾವು ಮೂಢನಂಬಿಕೆ ವಿರುದ್ಧ ಜನಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇವೆ. ನಮ್ಮ ಈ ಕೆಲಸಕ್ಕೆ ನೀವೆಲ್ಲರೂ ಕೈಜೋಡಿಸಬೇಕು ಎಂದು ನೆರೆದಿದ್ದ ಸುಮಾರು 2,000 ಜನರಲ್ಲಿ ಅವರು ಮನವಿಮಾಡಿಕೊಂಡರು.  

ಸಮಾರಂಭದ ಕ್ಷಣಗಳು

ಸಾಮಾಜಿಕ ಬದಲಾವಣೆ ಆಗುವವರೆಗೆ ಹೋರಾಟವನ್ನು ಮುಂದುವರೆಸುತ್ತೇವೆ. ತಳಸಮುದಾಯದಲ್ಲಿ ಸಾಮಾಜಿಕ ಜಾಗೃತಿಯನ್ನು ಮೂಡಿಸಿ ಉನ್ನತ ಶಿಕ್ಷಣ ನೀಡುವ ಮೂಲಕ ಆರ್ಥಿಕವಾಗಿ ಸಬಲೀಕರಣಗೊಳಿಸಿದರೆ ಮಾತ್ರ ಸಮಾನತೆ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಕಾರ್ಯಚಟುವಟಿಕೆಗಳನ್ನು ರೂಪಿಸಿ ಜಾರಿಗೆ ತರಲು ಪ್ರಯತ್ನಿಸುತ್ತೇವೆ ಎಂದರು.  

ಜನರು ದುಡಿಮೆಯ ಹಣವನ್ನು ಮೂಢನಂಬಿಕೆಗಳಿಗೆ ಖರ್ಚುಮಾಡದೆ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಕುಟುಂಬದ ಏಳಿಗೆಗೆ ಸದ್ಬಳಕೆ ಮಾಡಿಕೊಳ್ಳಲು ಜಾಗೃತರಾಗುವಂತೆ ಮನವಿ ಮಾಡಿದರು.  

ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಮಾತಾಡಿದ ಡಾ.ಬಿ.ಆರ್.ಅಂಬೇಡ್ಕರ್ ಮರಿಮೊಮ್ಮಗ ರಾಜರತ್ನ ಅಂಬೇಡ್ಕರ್, ಡಾ.ಬಿ.ಆರ್.ಅಂಬೇಡ್ಕರ್ ಅವರು ಬೌದ್ಧ ಧರ್ಮಕ್ಕೆ ಮತಾಂತರ ಹೊಂದಲು ಮಹತ್ವದ ಕಾರಣವಿತ್ತು. ಅವರು ಜೈನ, ಸಿಖ್, ಮುಸ್ಲಿಂ, ಕ್ರಿಶ್ಚಿಯನ್ ಮೊದಲಾದ ಧರ್ಮಗಳನ್ನು ಬಿಟ್ಟು ಬೌದ್ಧ ಧರ್ಮಕ್ಕೆ ಮತಾಂತರ ಹೊಂದಿದರು. ಏಕೆಂದರೆ, ಬೌದ್ಧ ಧರ್ಮದಲ್ಲಿ ಜಾತಿ ಇಲ್ಲ. ಇಲ್ಲಿ ಎಲ್ಲರನ್ನೂ ಸಮಾನತೆಯಿಂದ ಕಾಣಲಾಗುತ್ತದೆ. ಇಂತಹ ಸಮಾನತೆ ಬೇರೆ ಧರ್ಮಗಳಲ್ಲಿ ಇಲ್ಲ ಎಂದರು.  

ಸಮಾರಂಭದಲ್ಲಿ ನೆರೆದ ಅಪಾರ ಜನಸ್ತೋಮ

ನಾವೆಲ್ಲ ಮೂಲತಃ ನಾಗ ಕುಲಕ್ಕೆ ಸೇರಿದವರು. ಒಂದು ಕಾಲಕ್ಕೆ ಈ ದೇಶವನ್ನು ಆಳಿದವರು. ಆದರೆ, ನಾವು ಭಿಕ್ಷುಕರ ರೀತಿ ಸರದಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಇದೆ. ಇದಕ್ಕೆ ಕಾರಣ ಮೀಸಲಾತಿ. ಈಗಿನ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲ ಸರ್ಕಾರಿ ಸಂಸ್ಥೆಗಳನ್ನೂ ಖಾಸಗೀಕರಿಸುತ್ತಿದೆ. ಮುಂದೆ ನಿಮಗೆ ಮೀಸಲಾತಿ ಎಲ್ಲಿ ಸಿಗುತ್ತದೆ ಎಂದು ಪ್ರಶ್ನಿಸಿದರು.   ಘನತೆಯಿಂದ ಬದುಕಲು ನೀವೆಲ್ಲ ಮತಾಂತರ ಹೊಂದಿ. ಮತಾಂತರ ಹೊಂದಿದರೆ ನಿಮಗೆ ಯಾವುದೇ ರೀತಿಯ ನಷ್ಟವಾಗುವುದಿಲ್ಲ. ಇದಕ್ಕೆ ಅಂಬೇಡ್ಕರ್ ಅವರ ಸಂವಿಧಾನ ಮಾನ್ಯತೆ ನೀಡಿದೆ. ಮತಾಂತರದಿಂದ ನಿಮಗೆ ನಷ್ಟವಾಗುವುದಿಲ್ಲ. ಬದಲಾಗಿ ಜಾಗತಿಕ ಮಟ್ಟಕ್ಕೆ ನಿಮಗೆ ಏರುವ ಅವಕಾಶವಿದೆ. ಏಕೆಂದರೆ, ದಲಿತರ ವಿವಿಧ ಜಾತಿಗಳು ದೇಶದಲ್ಲಿವೆ. ಬೌದ್ಧ ಎಂದು ನೀವು ಧರ್ಮದ ಕಾಲಂನಲ್ಲಿ ನಮೂದಿಸಿದರೆ ಜಾತಿ ನಮೂದಿಸುವುದು ಅಗತ್ಯವಿಲ್ಲ. ದೇಶದಲ್ಲಿ ಧರ್ಮ ಬೌದ್ಧ, ಜಾತಿ ಮಹರ್ ಎಂದು ನಮೂದಿಸಲಾಗುತ್ತದೆ. ಹೊರದೇಶದಲ್ಲಿ ಬೌದ್ಧ ಎಂದು ಮಾತ್ರ ನಮೂದಿಸಲಾಗುತ್ತದೆ ಎಂದರು.  

ಜೊತೆಗೆ, ನಾಗಪುರದಲ್ಲಿ 60 ಎಕರೆ ವಿಸ್ತೀರ್ಣದಲ್ಲಿ ಬೌದ್ಧ ವಿಶ್ವವಿದ್ಯಾಲಯ ಕಟ್ಟಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬ್ಯಾಂಕ್ ಗಳನ್ನು ತೆರೆಯಲಾಗುವುದು ಎಂದರು.

Share:

Leave a Reply

Your email address will not be published. Required fields are marked *

More Posts

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ

On Key

Related Posts

ಸಂವಿಧಾನದ ಮೂಲ ತತ್ವಗಳು – ಮುಂದಿನ ಸವಾಲುಗಳು

ನಮ್ಮ ಸಂವಿಧಾನದ ಯಾವುದೇ ಅನುಚ್ಛೇದದಲ್ಲಿ ಅದರ ಮೂಲ ತತ್ವಗಳು ಯಾವುವು ಎಂಬುದನ್ನು ತಿಳಿಯಪಡಿಸಿಲ್ಲ. ಆದರೆ ಸರ್ವೋಚ್ಛ ನ್ಯಾಯಾಲಯ 1973ರಲ್ಲಿ ಕೇಶವಾನಂದ ಭಾರತಿ ಪ್ರಕರಣದಲ್ಲಿ ಸಂವಿಧಾನದ ಮೂಲತತ್ವಗಳನ್ನು ಹೆಕ್ಕಿ ಪಟ್ಟಿ ಮಾಡಿ ಪ್ರಸ್ತುತಪಡಿಸಿದೆ. “ಈ ಮೂಲತತ್ವಗಳನ್ನು ಬದಲಿಸಲೂ ಆಗದು ಮತ್ತು ತಿದ್ದುಪಡಿ ಮಾಡಲು

ಭಕ್ತಿ ಪಂಥ: ಪ್ರೀತಿಯಲ್ಲಿ ರಾಜನು ಸೇವಕನಾಗುತ್ತಾನೆ

ಭಕ್ತಿ ಪಂಥ ‘ಭಜ’ಯೆಂಬ ಸಂಸ್ಕೃತ ಪದದ ಮೂಲದಿಂದ ‘ಭಕ್ತಿ’ಯೆಂಬ ಪದ ಬಂದಿದೆ. ಭಕ್ತಿಯೆಂದರೆ ಅರ್ಪಣೆ, ಪ್ರೀತಿ, ನಂಬಿಕೆ, ಆರಾಧನೆ. ಭಕ್ತಿಯೆಂಬ ಪದ ಭಗವದ್ಗೀತೆ ಮತ್ತು ಉಪನಿಷತ್‌ಗಳಲ್ಲಿ ಬಳಕೆಯಾಗಿದೆ. ಪ್ರಾಚೀನ ಕಾಲದಿಂದ ಭಾರತೀಯರಿಗೆ ಭಕ್ತಿಯೆಂಬ ಪದ ಚಿರಪರಿಚಿತ ಮತ್ತು ದಿನನಿತ್ಯ ಜೀವನದಲ್ಲಿ ಬಳಕೆಯಲ್ಲಿರುವ

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ ಇತಿಹಾಸವನ್ನು ನಾವು ತಿಳಿದುಕೊಂಡರೆ ಮುಂದಿನ ದಾರಿ ಯಾವುದೆಂದು ತಿಳಿಯುತ್ತದೆ. ನಮ್ಮ ಹಿರಿಯರ ಅನುಭವಗಳಿಂದ ನಾವು ಪಾಠವನ್ನು ಕಲಿತರೆ ಮುಂದೆ ನಮ್ಮ ದಾರಿ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ ಅನುಗುಣವಾಗಿ ರೂಪುಗೊಂಡಂತೆ ವಿವಿಧ ಭಾಷೆಗಳೂ ವಿಕಸನಗೊಂಡವು. ವಿಶ್ವಸಂಸ್ಥೆಯ ಒಂದು ಅಧ್ಯಯನದ ಪ್ರಕಾರ 1900ರಲ್ಲಿ 10,000 ಭಾಷೆಗಳು ಬಳಕೆಯಲ್ಲಿದ್ದವಂತೆ. ಆದರೆ ಇಂದು 6,700

ಮೌಢ್ಯಾಚರಣೆ – ವೈಚಾರಿಕತೆ

ಮೂಢನಂಬಿಕೆಗಳ ಪ್ರಾರಂಭ ಮಂಗ ಮಾನವನಾಗಿದ್ದು ಒಂದು ದೀರ್ಘಕಾಲದ ಪಯಣ. ಮಾನವನ ವಿಕಾಸದ ಒಂದು ಹಂತದಲ್ಲಿ ಅವನಿಗೂ ಬೇರೆ ಪ್ರಾಣಿಗಳಿಗೂ ಹೆಚ್ಚು ವ್ಯತ್ಯಾಸವಿರಲಿಲ್ಲ. ಉಳಿದ ಪ್ರಾಣಿಗಳಂತೆ ಹಸಿವಾದಾಗ ಬೇಟೆಯಾಡಿಕೊಂಡು, ಗೆಡ್ಡೆಗೆಣಸು ತಿಂದುಕೊಂಡು ಬದುಕುತ್ತಿದ್ದ. ಮಾನವನ ಮತ್ತು ಪ್ರಕೃತಿಯ ಕ್ರಿಯೆಗಳ ಮಧ್ಯೆ ನಿರಂತರವಾದ ಸಂಘರ್ಷ