ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಬಾಗಲಕೋಟೆಯ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ವೇಳೆ ಉಪಚುನಾವಣೆ ಕುರಿತು ಸ್ವಾಮೀಜಿ ಅವರೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಮಾತುಕತೆಯ ವೇಳೆ, ಜಯಮೃತ್ಯುಂಜಯ ಸ್ವಾಮೀಜಿಯವರು, ಕಳೆದ 30 ವರ್ಷಗಳ ರಾಜಕೀಯ ಸೇವೆಯೇ ನಿಮ್ಮ ಕೈ ಹಿಡಿಯಲಿದೆ. ಬೆಳಗಾವಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದೀರಿ ಎಂದು ಆಶೀರ್ವದಿಸಿದರು.

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ
ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ