September 22, 2023 12:51 am

ಯುವಕರ ಬದುಕು ಕಟ್ಟುವುದೇ ನಮ್ಮ ಗುರಿ: ರಾಹುಲ ಜಾರಕಿಹೊಳಿ

ಘಟಪ್ರಭಾ: ನಮ್ಮ ಯುವಕರು ದೇಶವನ್ನು ರಕ್ಷಣೆ ಮಾಡುವ ಸೇನೆ ಮತ್ತು ಸಮಾಜದಲ್ಲಿ ಜನರನ್ನು ರಕ್ಷಣೆ ಮಾಡುವ ಪೊಲೀಸ್ ಇಲಾಖೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೌಕರಿಗಳನ್ನು ಹಿಡಿದು ದೇಶ ಮತ್ತು ಸಮಾಜ ಸೇವೆ ಮಾಡುವ ಮುಲಕ ತಮ್ಮ ಬದುಕನ್ನು ಕಟ್ಟಿಕೊಂಡು ತಮ್ಮ ಕುಟುಂಬಗಳನ್ನು ಉತ್ತಮ ರೀತಿಯಲ್ಲಿ ನೋಡಿಕೊಂಡರೆ ಸತೀಶ ಜಾರಕಿಹೊಳಿ ಫೌಂಡೇಶನ್ನ ಮೂಲಕ ಮಾಡುತ್ತಿರುವ ಸಮಾಜ ಕಟ್ಟುವ ಕಾರ್ಯದ ಉದ್ದೇಶ ಈಡೇರುತ್ತದೆ, ಯುವಜನರನ್ನು ಉತ್ತಮ ಮಾರ್ಗದಲ್ಲಿ ಸಾಗುವಂತೆ ಮಾಡುವ ನಮ್ಮ ಕೆಲಸಕ್ಕೆ ಮತ್ತಷ್ಟು ಹುಮ್ಮಸ್ಸು ಬಂದಂತಾಗುತ್ತದೆ ಎಂದು ಯುವ ನಾಯಕ ರಾಹುಲ ಜಾರಕಿಹೊಳಿ ಹೆಳಿದರು.

        ಘಟಪ್ರಭದ ಸೇವಾದಳದಲ್ಲಿ ಆರಂಭವಾದ ಆಸಕ್ತ ಯುವಕರಿಗೆ ಹತ್ತು ದಿನಗಳ ಕಾಲ ನಡೆಯುವ ಎರಡನೇ ಬ್ಯಾಚಿನ ಉಚಿತ ಸೇನಾ ಮತ್ತು ಪೊಲೀಸ್ ಕಾನ್ಟೇಬಲ್ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಸೇನೆ ಸೇರಿ ದೇಶಕ್ಕಾಗಿ ಸೇವೆ ಸಲ್ಲಿಸುವುದು ಹಾಗೂ ಪೋಲಿಸ್ ಇಲಾಖೆಗೆ ಸೇರುವುದು ನಮ್ಮ ಯುವಕರಿಗೆ ಹೆಮ್ಮೆಯ ವಿಷಯವಾಗಿದೆ ಅದಕ್ಕಾಗಿ ಅವರು ಸಾಕಷ್ಟು ಕಷ್ಟ ಪಡುತ್ತಿದ್ದಾರೆ. ಅವರ ಗುರಿ ಸಾಧನೆಗೆ ಸತಿಶ ಜಾರಕಿಹೊಳಿ ಫೌಂಡೇಶನ್ ಬೆನ್ನೆಲುಬಾಗಿ ಕೆಲಸ ಮಾಡಲಿದೆ ಇದರ ಸದುಪಯೋಗವನ್ನು ಎಲ್ಲ ಯುವಕರು ಪಡೆದುಕೊಳ್ಳುವಂತಾಗಬೇಕು, ಇಲ್ಲಿ ತರಬೇತಿ ಪಡೆದ ಪ್ರತಿಯೊಬ್ಬರಿಗೂ ಜೀವನದಲ್ಲಿ ಯಶಸ್ಸು ಸಿಗುವಂತಾಗಲಿ ಎಂದು ಹಾರೈಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ,  ಕೆ.ಎ.ಎಸ್/ಐ.ಎ.ಎಸ್ ತರಬೇತಿ ನೀಡುವುದಕ್ಕಿಂತ ಸೇನೆ ಮತ್ತು ಪೊಲೀಸ್ ತರಬೇತಿ ನೀಡುವದಕ್ಕೆ ಮಹತ್ವ ನೀಡಿರುವದಕ್ಕೆ ಕಾರಣ ಇದು ಸಾಕಷ್ಟು ಬಡ ಯುವಕರಿಗೆ ಅನುಕೂಲವಾಗುತ್ತದೆ. ಇದು ಸನ್ಮಾನ್ಯ ಸತೀಶ ಜಾರಕಿಹೊಳಿಯವರ ಬಹಳ ದಿನಗಳ ಕನಸಾಗಿತ್ತು. ಈಗ ಅದು ನನಸಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬೆಳಗಾವಿಯ ಟಾರ್ಗೆಟ್ ಕೋಚಿಂಗ್ ಸೆಂಟರ್ನ ಪ್ರಕಾಶ ಮೇಟಿ,   ದೈಹಿಕ ತರಬೇತುದಾರ ಸುಭಾಸ ನಾಯ್ಕ, ಶಿಕ್ಷಕರಾದ ಸಂತೋಷ ಮೆಳವಂಕಿ, ಹನಮಂತ ನಂದಿ, ಸಮಾಜ ಸೇವಕ ಶಿವು ಪಾಟೀಲ, ಉಷಾ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

ಹತ್ತು ದಿನಗಳ ಕಾಲ ನಡೆಯುವ ಶಿಬಿರದಲ್ಲಿ ವಿವಿಧ ಭಾಗಗಳಿಂದ ಬಂದ 70 ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ.

Share:

Leave a Reply

Your email address will not be published. Required fields are marked *

More Posts

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ

On Key

Related Posts

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ

ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ

ಇಂದು ಆಗಸ್ಟ್ 20. ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆಯ ಸಂದರ್ಭದಲ್ಲಿ ಒಂದಷ್ಟು ಮಾತುಕತೆ…….. ವಿಜ್ಞಾನ ಮತ್ತು ಧರ್ಮ ಒಂದಕ್ಕೊಂದು ಪೂರಕವೇ ಅಥವಾ ವಿರುದ್ದವೇ ಅಥವಾ ಪರ್ಯಾಯವೇ ಅಥವಾ ಸಮಾನಾಂತರವೇ ಅಥವಾ ಪ್ರತಿಸ್ಪರ್ಧಿಗಳೇ ಅಥವಾ ಸಂಬಂಧವಿಲ್ಲವೇ….. ಧರ್ಮ ( ಮತ ) ಎಂಬುದು

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ.

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಅನುಭವಿಸಿಕೊಂಡು ಬಂದಿದ್ದಾರೆ. ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಸಮಾನತೆಯನ್ನು ತರುವುದು ನಮ್ಮ ಸಂವಿಧಾನದ

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು