ಬೆಂಗಳೂರು: ರಾಜ್ಯದಾದ್ಯಂತ ಬಹುನಿರೀಕ್ಷಿತ 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಪರೀಕ್ಷೆ ಬರೆದವರ ಪೈಕಿ ಶೇ. 90.29ರಷ್ಟು ವಿದ್ಯಾರ್ಥಿನಿಯರು, ಶೇ. 81.30ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಈ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಗೆ 8,53,436 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರ ಪೈಕಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ. 85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಮಾಹಿತಿ ನೀಡಿದ್ದಾರೆ.
ಫಲಿತಾಂಶ ನೋಡಬೇಕಾದ ವಿದ್ಯಾರ್ಥಿಗಳು http://kseeb.kar.nic.in/ ಅಥವಾ karresults.nic.in ಗೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ನೋಡಬಹುದು. ಜೊತೆಗೆ, ಆಯಾ ವಿದ್ಯಾರ್ಥಿಗಳು ತಮ್ಮ ಶಾಲೆಗಳಲ್ಲಿ, ಎಸ್‌ಎಂಎಸ್ ಮೂಲಕ ಫಲಿತಾಂಶ ಪಡೆಯಲು ಅವಕಾಶವಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಮಾರ್ಚ್ /ಏಪ್ರಿಲ್ 2022 ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿತ್ತು. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಕ್ರಿಯೆ ಆರಂಭವಾಗಿ, ಇದೀಗ ಫಲಿತಾಂಶ ಘೋಷಣೆಯಾಗಿದೆ
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಚೆಕ್ ಮಾಡುವ ವಿಧಾನ
- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್‌ಸೈಟ್ http://kseeb.kar.nic.in/ ಅಥವಾ karresults.nic.in ಗೆ ಭೇಟಿ ನೀಡಿ.
- ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ನೀಡಿ.
- ನಂತರ ‘Submit’ ಕ್ಲಿಕ್ ಮಾಡಿದರೆ ಫಲಿತಾಂಶ ಗೋಚರಿಸುತ್ತದೆ.
ಇಂದಿನ ಫಲಿತಾಂಶದಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಜೂನ್ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಫಲಿತಾಂಶಕ್ಕಾಗಿ http://kseeb.kar.nic.in/ ಅಥವಾ karresults.nic.in ಇಲ್ಲಿ ಕ್ಲಿಕ್ ಮಾಡಿ.