ದಾವಣಗೆರೆ: ಮಾನವ ಬಂಧುತ್ವ ವೇದಿಕೆ – ಕರ್ನಾಟಕ ಮತ್ತು ಕಲಾ ಬಂಧುತ್ವ ವೇದಿಕೆ ಇವರ ಸಹಯೋಗದಲ್ಲಿ ಹರಿಹರದ ಮೈತ್ರಿವನ ತರಬೇತಿ ಕೇಂದ್ರದಲ್ಲಿ ರಾಜ್ಯದ ಕಲಾವಿದರಿಗೆ ಉಚಿತ ಬೀದಿನಾಟಕ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.






ಕಾರ್ಯಕ್ರಮದ ಉದ್ಘಾಟನೆಯನ್ನು ದಾವಣಗೆರೆಯ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಮಂಜುನಾಥ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನವ ಬಂಧುತ್ವ ವೇದಿಕೆಯ ಸಂಚಾಲಕ ಪ್ರೊ.ಎ.ಬಿ.ರಾಮಚಂದ್ರಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಕವಿ, ನಾಟಕಕಾರ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಪ್ರೊ.ಎಸ್.ಜಿ.ಸಿದ್ಧರಾಮಯ್ಯ, ಹಿರಿಯ ಬಂಡಾಯ ಸಾಹಿತಿ ಮತ್ತು ಪತ್ರಕರ್ತರಾದ ಆರ್.ಜಿ.ಹಳ್ಳಿನಾಗರಾಜ್, ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ.ವಸುಂಧರಾ ಭೂಪತಿ ಹಾಗೂ ಇತರರು ಭಾಗವಹಿಸಿ ಮಾತನಾಡಿದರು. ರಾಜ್ಯದ ವಿವಿಧ ಜಿಲ್ಲೆಯ ಕಲಾತಂಡಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಹಾಜರಿದ್ದರು.
ಶಿಬಿರದ ಸಂಚಾಲಕರಾಗಿರುವ ಅಂಜಿನಪ್ಪಲೋಕಿಕೆರೆ ಶಿಬಿರಾರ್ಥಿಗಳಿಗೆ ಡಾ.ರಾಜಪ್ಪ ದಳವಾಯಿ ಅವರ ‘ವಿ ದ ಪೀಪಲ್ ಆಫ್ ಇಂಡಿಯಾ’ ನಾಟಕವನ್ನು ನಿರ್ದೇಶಿಸುತ್ತಿದ್ದಾರೆ.








