May 13, 2026 11:42 pm

ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ನಾಗಮೋಹನ್ ದಾಸ್ ಅವರು ಸಂವಿಧಾನ ಓದು, ಸಂವಿಧಾನ ಮತ್ತು ವಚನಗಳು, ಮಾನವ ಹಕ್ಕುಗಳು ಮತ್ತು ಮೀಸಲಾತಿ ಭ್ರಮೆ ಮತ್ತು ವಾಸ್ತವ ಮೊದಲಾದ ಕೃತಿಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ. ಈ ಮೂಲಕ ಸಾಂವಿಧಾನಿಕ ಆಶಯಗಳನ್ನು ಕನ್ನಡಿಗರಿಗೆ ಸರಳವಾಗಿ ತಲುಪಿಸುವ ಕೆಲಸವನ್ನು ಮಾಡಿದ್ದಾರೆ. ಮಾನವ ಹಕ್ಕುಗಳ ರಕ್ಷಣೆ ಮತ್ತು ಸಂವಿಧಾನದ ರಕ್ಷಣೆಯ ವಿಷಯದಲ್ಲಿ ಸಕ್ರಿಯರಾಗಿದ್ದಾರೆ. ನೂರಾರು ಉಪನ್ಯಾಸಗಳನ್ನು ನೀಡಿರುವ ಇವರು ಮಾನವೀಯ ಮೌಲ್ಯಗಳ ಪ್ರತಿಪಾದಕರಾಗಿದ್ದಾರೆ.

ಭಾತದಲ್ಲಿ ಅನೇಕ ಜಾತಿಗಳಿವೆ. ಇಲ್ಲಿ ಮೇಲ್ದಾತಿಗಳು ಮೇಲ್ವರ್ಗಗಳು, ಕೆಳ ಜಾತಿಗಳು ಕೆಳವರ್ಗಗಳು. ಶತಮಾನಗಳ ಕಾಲ ಕೆಳಜಾತಿಯ ಜನರಿಗೆ ಶಿಕ್ಷಣ, ಆಸ್ತಿಯಲ್ಲಿ ಹಕ್ಕು, ಆಡಳಿತದಲ್ಲಿ ಭಾಗವಹಿಸುವ ಹಕ್ಕು, ಸ್ವಾತಂತ್ರ್ಯದ ಹಕ್ಕು ಇತ್ಯಾದಿಗಳನ್ನು ನಿರಾಕರಿಸಿ ಶೋಷಿಸಿ ಗುಲಾಮರಂತೆ ನಡೆಸಿಕೊಂಡು ಬರಲಾಯಿತು. ಈ ರೀತಿಯ ಅಸಮಾನತೆಯನ್ನು ಹೋಗಲಾಡಿಸಿ ಸಮಾನತೆಯನ್ನು ತರಬೇಕೆಂಬುದು ನಮ್ಮ ಸ್ವಾತಂತ್ರ್ಯ ಹೋರಾಟದ ಬಯಕೆಯಾಗಿತ್ತು. ದೇಶವನ್ನು ಕಟ್ಟುವ ಪ್ರಕ್ರಿಯೆಯಲ್ಲಿ ಎಲ್ಲಾ ಜಾತಿಯ, ಸಾಮರ್ಥ್ಯದ ಜನ ಭಾಗಿಯಾಗಿರಬೇಕು ಎನ್ನುವುದು ಆಶಯವಾಗಿತ್ತು. ಹಾಗಾಗಿ ಮೀಸಲಾತಿಯೆಂಬ ನೀತಿ ನಮ್ಮ ಸ್ವಾತಂತ್ರ್ಯ ಚಳುವಳಿಯ ಗುರಿಯಾಯಿತು.

ಸ್ವಾತಂತ್ರ್ಯ ಹೋರಾಟದ ಗುರಿಗಳ ಸಾಧನೆಗೆ ಒಂದು ಸಂವಿಧಾನದ ಅವಶ್ಯಕತೆ ಅನಿವಾರ್ಯವಾಯಿತು. ನಮ್ಮ ಸಂವಿಧಾನದಲ್ಲಿ ಪ.ಜಾ, ಪ.ಪಂ ಮತ್ತು ಹಿಂದುಳಿದ ವರ್ಗಗಳಿಗೆ ರಾಜಕೀಯ, ಶೈಕ್ಷಣಿಕ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಯನ್ನು ನೀಡಲಾಗಿದೆ.

ಚಾರಿತ್ರಿಕವಾಗಿ ಅವಕಾಶ ವಂಚಿತ ಸಮುದಾಯಗಳಿಗೆ ಮೀಸಲಾತಿಯು ಒಂದು ಮಾನವ ಹಕ್ಕು, ಸಮಾನತೆಯ ಸಾಧನೆ, ಸರ್ಕಾರದ ಆಡಳಿತದಲ್ಲಿ ಒಂದು ಪ್ರಾತಿನಿಧ್ಯ ಮತ್ತು ಎಲ್ಲ ರೀತಿಯ ಪಕ್ಷಪಾತ ಹಾಗೂ ಬಹಿಷ್ಕಾರದ ವಿರುದ್ಧ ಒಂದು ಮಹತ್ತರ ಸಾಧನೆ.

ನಮ್ಮ ಸಂವಿಧಾನದ ಪೀಠಿಕೆಯಲ್ಲಿ ಎಲ್ಲರಲ್ಲಿ ಭಾವೈಕ್ಯ ಮೂಡಿಸಲು ದೃಢಸಂಕಲ್ಪ ಮಾಡಲಾಗಿದೆ. ಅಸಮಾನತೆಯಿಂದ ಭಾತೃತ್ವಕ್ಕೆ ಧಕ್ಕೆಯಾಗುತ್ತದೆ. ಭಾತೃತ್ವವಿಲ್ಲದಾಗ ದೇಶದ ಜನರ ಒಗ್ಗಟ್ಟನ್ನು ಸಾಧಿಸಲು ಸಾಧ್ಯವಿಲ್ಲ. ಸಮಾನ ಅವಕಾಶಗಳು ದೊರೆಯುವುದು ಖಚಿತವಾಗಿದ್ದರೆ ಸಂವಿಧಾನದ ಗುರಿ ಭಾತೃತ್ವವನ್ನು ಸಾಧಿಸಲು ಸಾಧ್ಯ.

ಪ್ರತಿಯೊಬ್ಬ ವ್ಯಕ್ತಿ ಆತ್ಮಗೌರವದಿಂದ ಬದುಕುವಂತಹ ಅವಕಾಶವನ್ನು ದೊರಕಿಸಿಕೊಡುವುದು ನಮ್ಮ ಸಂವಿಧಾನದ ಆಶಯ, ಸ್ಥಾನಮಾನ ಹಾಗು ಅವಕಾಶಗಳಲ್ಲಿ ಸಮಾನತೆ ಇಲ್ಲದಿದ್ದರೆ ಆತ್ಮಗೌರವವಿರಲು ಸಾಧ್ಯವಿಲ್ಲ. ಸಮಾಜದ ಒಂದು ಗಣನೀಯ ವರ್ಗದ ಜನರಿಗೆ ಅಭಿವೃದ್ಧಿ ಹೊಂದುವ, ಆಡಳಿತ ನಡೆಸುವ ಹಾಗೂ ಸಮಾಜಕ್ಕೆ ತಮ್ಮ ಉತ್ತಮವಾದ ಕೊಡುಗೆಯನ್ನು ನೀಡುವ ಸಮಾನ ಅವಕಾಶಗಳನ್ನು ಕೊಡದೇ ಇದ್ದಾಗ ಪ್ರಜಾಸತ್ತಾತ್ಮಕ ತಳಹದಿಯ ಅಂಶಗಳೇ ಕಾಣೆಯಾಗಿ ಬಿಡುತ್ತವೆ.

ಜಾತಿ, ಜನಾಂಗ, ಧರ್ಮ ಹಾಗೂ ಲಿಂಗ ಅಸಮಾನತೆಗಳನ್ನು ತೊರೆದು ಎಲ್ಲರೂ ಸಮಾನವಾಗಿ ರಾಜ್ಯದ ಆಡಳಿತದಲ್ಲಿ ಭಾಗಿಯಾದಾಗ ಮತ್ತು ಎಲ್ಲ ರೀತಿಯ ತಾರತಮ್ಯಗಳನ್ನು ನಿವಾರಿಸಿದಾಗ ಸಂವಿಧಾನದ ಮೂಲತತ್ವಗಳಾದ ಪ್ರಜಾಪ್ರಭುತ್ವ, ಜಾತ್ಯತೀತ ಮತ್ತು ಸಾಮಾಜಿಕ ನ್ಯಾಯವನ್ನು ಸಾಧಿಸಲು ಸಾಧ್ಯ.

ಮೀಸಲಾತಿ ಎಂಬುದು ಬಡತನ ನಿರ್ಮೂಲನ ಕಾರ್ಯಕ್ರಮವೂ ಅಲ್ಲ ಅಥವಾ ಜಾತಿಗಳ ವಿನಾಶದ ಕಾರ್ಯಕ್ರಮವೂ ಅಲ್ಲ. ಪ್ರಾತಿನಿಧ್ಯ ವಂಚಿತರಿಗೆ ಪ್ರಾತಿನಿಧ್ಯವನ್ನು ನೀಡುವುದೇ ಮೀಸಲಾತಿ, ಇದೊಂದು ಭಿಕ್ಷೆಯಲ್ಲ ಬದಲಿಗೆ, ಅದೊಂದು ಮಾನವ ಹಕ್ಕು ಮತ್ತು ಸಂವಿಧಾನದ ಹಕ್ಕು.

Share:

Leave a Reply

Your email address will not be published. Required fields are marked *

More Posts

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ

On Key

Related Posts

Composition of the Legislative Assemblies

Composition of the Legislative Assemblies:- (Subs. by the Constitution (Seventh Amendment) Act, 1956, s. 9, for art. 170.) (1) Subject to the provisions of article 333, the Legislative Assembly of

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ ಮೂಲ ಅನುಚ್ಛೇದಕ್ಕೆ ಬದಲಾಗಿ ಪ್ರತ್ಯಾಯೋಜಿಸಲಾಗಿದೆ.) (1) 333ನೆಯ ಅನುಚ್ಛೇದದ ಉಪಬಂಧಗಳಿಗೊಳಪಟ್ಟು, ಪ್ರತಿಯೊಂದು ರಾಜ್ಯದ ವಿಧಾನಸಭೆಯು ಆ ರಾಜ್ಯದಲ್ಲಿನ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಿಂದ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ ಅದನ್ನು ರದ್ದುಗೊಳಿಸಬೇಕೆಂದು ಅಥವಾ ಅಂಥ ಪರಿಷತ್ತು ಇಲ್ಲದ ರಾಜ್ಯದಲ್ಲಿ ಅಂಥ ಪರಿಷತ್ತನ್ನು ಸೃಜಿಸಬೇಕೆಂದು ಆ ರಾಜ್ಯದ ವಿಧಾನಸಭೆಯು ಆ ಸಭೆಯ ಒಟ್ಟು

CHAPTER III- THE STATE LEGISLATURE

General 168. Constitution of Legislatures in States:- (1) For every State there shall be a Legislature which shall consist of the Governor, and- (a) in the States of [Andhra Pradesh,]