ಬೆಳಗಾವಿ: ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಇಡೀ ರಾಜ್ಯಾದ್ಯಂತ ಬಸವ ಪಂಚಮಿಯನ್ನು ಆಚರಿಸುತ್ತಿದ್ದೇವೆ. ಮೌಢ್ಯಗಳ ವಿರುದ್ಧ ಬಸವಣ್ಣನವರ ಹೋರಾಟವನ್ನು ಜನರಿಗೆ ತಿಳಿಸುವ ಕಾರ್ಯ ನಡೆಸುತ್ತಿದ್ದೇವೆ ಎಂದು ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಸತೀಶ್ ಜಾರಕಿಹೊಳಿ ಹೇಳಿದರು.
ಘಟಪ್ರಭಾ ಪಟ್ಟಣದ ಕೆಎಚ್ಐ ಆಸ್ಪತ್ರೆಯಲ್ಲಿ ಮಾನವ ಬಂದುತ್ವ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಂಯುಕ್ತ ಆಶ್ರಯದಲ್ಲಿ ರೋಗಿಗಳಿಗೆ ಹಾಲು, ಹಣ್ಣು, ಬಿಸ್ಕೆಟ್ ವಿತರಣೆ ಮಾಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಲಾಯಿತು. ಘಟಪ್ರಭಾದ ಗುಬ್ಬಲಗುಡ್ಡ ಮಹಾಸ್ವಾಮೀಜಿ ಶ್ರೀ ಮಲ್ಲಿಕಾರ್ಜುನ ದೇವರು ಇದ್ದರು.
ಕೆ.ಎಚ್.ಐ ಆಸ್ಪತ್ರೆಯ ವಿವಿಧ ವಾರ್ಡ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯರು, ಪುರುಷರು, ವೃದ್ಧರಿಗೆ ಇದೇ ವೇಳೆ ಸತೀಶ್ ಜಾರಕಿಹೊಳಿ, ಶ್ರೀ ಮಲ್ಲಿಕಾರ್ಜುನ ದೇವರು, ಮಾನವ ಬಂದುತ್ವ ವೇದಿಕೆಯ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಾಲು, ಹಣ್ಣು, ಬಿಸ್ಕೆಟ್ ವಿತರಿಸಿದರು. ಈ ಸಂದರ್ಭದಲ್ಲಿ ಮಾನವ ಬಂದುತ್ವ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಉಪಸ್ಥಿತರಿದ್ದರು.